ಜಾಗತಿಕ ಅನಿಶ್ಚಿತತೆಗಳಿಂದಾಗಿ ಭಾರತ ಸ್ವಾವಲಂಬಿಯಾಗುವ ಅಗತ್ಯ ಇದೆ. ಈ ನಿಶ್ಚಿತತೆಗಳನ್ನು ಎದುರಿಸಲು ಭಾರತವನ್ನು ಕೃಷಿ ಸ್ವಾವಲಂಬನೆಯತ್ತ ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಸಾಂಪ್ರದಾಯಿಕ ಕೃಷಿ ವಿಧಾನಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಅಗತ್ಯ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. …… ಮುಂದೆ ಓದಿ……
ರೈತರು, ಪಶುವೈದ್ಯ ಪದವೀಧರರು ಮತ್ತು ತಜ್ಞರನ್ನು ಸನ್ಮಾನಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶೀಯ ಜಾನುವಾರುಗಳನ್ನು ಸಾಕುವುದರ ಜೊತೆಗೆ ಸಾಂಪ್ರದಾಯಿಕ ಕೃಷಿ ವಿಧಾನಗಳು ಮತ್ತು ಪಶುಸಂಗೋಪನೆಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸುವುದರಿಂದ ಭಾರತವು ಕೃಷಿಯಲ್ಲಿ ಸ್ವಾವಲಂಬಿಯಾಗಬಹುದು ಎಂದರು. ಆಧುನಿಕ ಪ್ರಗತಿಯ ಜೊತೆಗೆ ಸಾಂಪ್ರದಾಯಿಕ ಕೃಷಿ ತಂತ್ರಗಳನ್ನು ಬಳಸಿಕೊಳ್ಳುವ ಮೂಲಕ, ರೈತರು ಅಭಿವೃದ್ಧಿ ಹೊಂದಬಹುದು ಮತ್ತು ರಾಷ್ಟ್ರೀಯ ಸ್ವಾವಲಂಬನೆಗೆ ಕೊಡುಗೆ ನೀಡಬಹುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….




