ಭಾರತದ ಶಕ್ತಿ, ಸಾಮರ್ಥ್ಯ ‘ಚಿನ್ನದ ಗಣಿ’ ಗಿಂತ ಜಾಸ್ತಿ | ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ

February 24, 2023
7:43 PM

ಭಾರತದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವು “ಚಿನ್ನದ ಗಣಿ” ಗಿಂತ ಕಡಿಮೆಯೇನಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದೇ ಸಂದರ್ಭ ಅವರು ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು  ಉದ್ಯಮಿಗಳನ್ನು ಆಹ್ವಾನಿಸಿದ್ದಾರೆ.

Advertisement
Advertisement
Advertisement

ಹಸಿರು ಬೆಳವಣಿಗೆಯ ಕುರಿತು 2023-24ರ ಕೇಂದ್ರ ಬಜೆಟ್‌ ಅನೇಕ ಘೋಷಣೆಗಳನ್ನು ಮಾಡಲಾಗಿತ್ತು. ಈ ಕುರಿತು ಬಜೆಟ್ ನಂತರದ ವೆಬ್‌ನಾರ್‌ನಲ್ಲಿ ಮೋದಿ ಅವರು ಪ್ರಮುಖ ಕೈಗಾರಿಕೋದ್ಯಮಿಗಳು, ತಜ್ಞರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಉದ್ದೇಶಿಸಿ ಮಾತನಾಡುತ್ತಿದ್ದರು. “ಭಾರತವು ಹಸಿರು ಇಂಧನ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ನಾನು ಭಾರತದಲ್ಲಿ ಹೂಡಿಕೆ ಮಾಡಲು ಎಲ್ಲಾ ಪಾಲುದಾರರನ್ನು ಆಹ್ವಾನಿಸುತ್ತೇನೆ ಎಂದು ಕರೆ ನೀಡಿದರು.

Advertisement

ಭಾರತದಲ್ಲಿ ಸೌರಶಕ್ತಿ, ಪವನ ಶಕ್ತಿ ಮತ್ತು ಜೈವಿಕ ಅನಿಲದಂತಹ ನವೀಕರಿಸಬಹುದಾದ ಶಕ್ತಿಯ ಸಾಮರ್ಥ್ಯವು ಅಗಾಧವಾದುದ್ದು. ಸರ್ಕಾರವು ಜೈವಿಕ ಇಂಧನದ ಮೇಲೆ ಹೆಚ್ಚು ಗಮನಹರಿಸಿದೆ ಮತ್ತು ಇದು ಹೂಡಿಕೆದಾರರಿಗೆ ಸಾಕಷ್ಟು ಅವಕಾಶವನ್ನು ತರುತ್ತದೆ ಎಂದು ಹೇಳಿದರು.

ನಿಗದಿತ ಸಮಯಕ್ಕಿಂತ ಐದು ತಿಂಗಳ ಮುಂಚಿತವಾಗಿ ಭಾರತವು ಶೇಕಡಾ 10 ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುತ್ತದೆ ಎಂದವರು ಉಲ್ಲೇಖಿಸಿದರು. ನಿಗದಿತ ಅವಧಿಗಿಂತ ಒಂಬತ್ತು ವರ್ಷಗಳ ಮುಂಚಿತವಾಗಿ 40 ಪ್ರತಿಶತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಗುರಿಯನ್ನು ತಲುಪುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

Advertisement

2014 ರಿಂದ ಬಜೆಟ್‌ಗಳು ಪ್ರಸ್ತುತ ಸವಾಲುಗಳನ್ನು ಮಾತ್ರ ಪರಿಹರಿಸಿಲ್ಲ. ಹೊಸ ಯುಗದ ಸುಧಾರಣೆಗಳನ್ನು ಹೆಚ್ಚಿಸಿವೆ ಎಂದು ಹೇಳಿದರು. ಭಾರತವು ವಾರ್ಷಿಕವಾಗಿ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆಯ ಗುರಿಯನ್ನು ಹೊಂದಿದೆ. ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಅಡಿಯಲ್ಲಿ ಖಾಸಗಿ ವಲಯಕ್ಕೆ 19 ಸಾವಿರ ಕೋಟಿ ಪ್ರೋತ್ಸಾಹವನ್ನು ನೀಡುತ್ತದೆ. ವಾಹನ ಸ್ಕ್ರ್ಯಾಪಿಂಗ್‌ಗೆ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡುವ ಬಗ್ಗೆ ಮಾತನಾಡಿದ ಅವರು, 15 ವರ್ಷಕ್ಕಿಂತ ಹಳೆಯದಾದ ಸುಮಾರು 3 ಲಕ್ಷ ಸರ್ಕಾರಿ ವಾಹನಗಳನ್ನು ರದ್ದುಗೊಳಿಸಲಾಗುವುದು.

ಭಾರತವು ಬ್ಯಾಟರಿ ಶೇಖರಣಾ ಸಾಮರ್ಥ್ಯವನ್ನು ಗಂಟೆಗೆ 125 ಗಿಗಾವ್ಯಾಟ್‌ಗಳಿಗೆ ಹೆಚ್ಚಿಸಬೇಕಾಗಿದೆ ಎಂದು ಹೇಳಿದರು. ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಶಕ್ತಿಯನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror