ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ ಕೃಷಿ ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ. ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್‌ಗಳಿಂದ 2022-23 ರಲ್ಲಿ 500 ಕೋಟಿ ಲೀಟರ್‌ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ, ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ ವಿದೇಶಿ ವಿನಿಮಯದ ಉಳಿತಾಯವಾಗಿದೆ. 544 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…