#chessworldcup | ಇತಿಹಾಸ ಸೃಷ್ಟಿಸಲು ಸಜ್ಜಾದ ಭಾರತದ ಹೆಮ್ಮೆಯ ಪುತ್ರ ಆರ್ ಪ್ರಜ್ಞಾನಂದ | ಇಂದು ನಡೆಯಲಿದೆ ಚೆಸ್​ ವಿಶ್ವಕಪ್ ಫೈನಲ್

August 22, 2023
12:05 PM
ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಜ್ಞಾನಂದ ಅವರು ಐದು ಬಾರಿ ಪ್ರಶಸ್ತಿ ವಿಜೇತ ವಿಶ್ವ ನಂಬರ್ 1 ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಎದುರಿಸಲಿದ್ದಾರೆ. ಇವರಿಬ್ಬರು ಈ ಹಿಂದೆ ಕೆಲ ಬಾರಿ ಮುಖಾಮುಖಿ ಆಗಿದ್ದಾರೆ.

ನಮ್ಮ ದೇಶದ ಹೆಮ್ಮೆಯ ಪುತ್ರ. ಭಾರತದ ಕೀರ್ತಿ ಪತಾಕೆಯನ್ನು ಇಡೀ ವಿಶ್ವದಾದ್ಯಂತ ಅತ್ಯಂತ ಕಿರಿ ವಯಸ್ಸಿನಲ್ಲೆ ಪಸರಿಸಿದ ಗೌರವ ಈ ಪುಟ್ಟ ಪೋರನಿಗೆ ಸಲ್ಲುತ್ತದೆ. ಈತ ನಿಜಕ್ಕೂ ಭಾರತ ಮಾತೆಯ ಹೆಮ್ಮೆಯ ಪುತ್ರ.  ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆಯುತ್ತಿರುವ ಚೆಸ್ ವಿಶ್ವಕಪ್‌ #ChessWordcup ಅಂತಿಮ ಹಂತಕ್ಕೆ ಬಂದು ನಿಂತಿದೆ. ಸೋಮವಾರ ನಡೆದ ಸೆಮಿಫೈನಲ್‌ #Semifinalನಲ್ಲಿ ವಿಶ್ವದ ನಂಬರ್ 3ನೇ ಶ್ರೇಯಾಂಕದ ಫ್ಯಾಬಿಯಾನೊ ಕರುವಾನಾ ಅವರನ್ನು ಬಗ್ಗುಬಡಿದ 18 ವರ್ಷದ ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಜ್ಞಾನಂದ #RPraggnanandhaa ಫೈನಲ್​ಗೆ ಪ್ರವೇಶಿಸಿದ್ದಾರೆ.

Advertisement
Advertisement

ಚೆಸ್​ ವಿಶ್ವಕಪ್ ಫೈನಲ್ ಪಂದ್ಯ ಇಂದು (ಆಗಸ್ಟ್ 22) ಆಯೋಜಿಸಲಾಗಿದೆ. ಚೆಸ್​ ವಿಶ್ವಕಪ್ ಫೈನಲ್ ಪಂದ್ಯ ಅಝರ್​ಬೈಜಾನ್​ನ ಸ್ಥಳೀಯ ಕಾಲಮಾನದ ಪ್ರಕಾರ ಬೆಳಗ್ಗೆ 7 ಗಂಟೆಗೆಗ ಆರಂಭವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಹೆ 4:30ಕ್ಕೆ ಶುರುವಾಗಲಿದೆ. ಚೆಸ್​ ವಿಶ್ವಕಪ್ ಫೈನಲ್ ಪಂದ್ಯದ ನೇರಪ್ರಸಾರವನ್ನು #FIDE World Cup chess24 ಯೂಟ್ಯೂಬ್ ಚಾನೆಲ್​ನಲ್ಲಿ ವೀಕ್ಷಿಸಬಹುದು.

ಪ್ರಜ್ಞಾನಂದಗೆ ಫೈನಲ್​ನಲ್ಲಿ ಮ್ಯಾಗ್ನಸ್ ಕಾರ್ಲ್‌ಸನ್‌#Magnus Carlsen ಎದುರಾಳಿ – ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಜ್ಞಾನಂದ ಅವರು ಐದು ಬಾರಿ ಪ್ರಶಸ್ತಿ ವಿಜೇತ ವಿಶ್ವ ನಂಬರ್ 1 ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಎದುರಿಸಲಿದ್ದಾರೆ. ಇವರಿಬ್ಬರು ಈ ಹಿಂದೆ ಕೆಲ ಬಾರಿ ಮುಖಾಮುಖಿ ಆಗಿದ್ದಾರೆ. ಹಿಂದಿನ ಮುಖಾಮುಖಿಗಳಲ್ಲಿ ಕಾರ್ಲ್‌ಸೆನ್ ಅವರನ್ನು ವಿಭಿನ್ನ ಸ್ವರೂಪದಲ್ಲಿ ಪ್ರಜ್ಞಾನಂದ ಅವರು ಐದು ಬಾರಿ ಸೋಲಿಸಿದ ದಾಖಲೆ ಹೊಂದಿದ್ದಾರೆ. ಸೆಮಿ ಫೈನಲ್​ನಲ್ಲಿ ಗೆಲುವು ಸಾಧಿಸುವ ಮೂಲಕ, ಪ್ರಜ್ಞಾನಂದ ಅವರು 2024 ರಲ್ಲಿ ನಡೆಯಲಿರುವ ಕ್ಯಾಂಡಿಡೇಟ್ಸ್ ಟೂರ್ನಮೆಂಟ್‌ನಲ್ಲಿ ಆಡಲು ಅರ್ಹತೆ ಪಡೆದಿದ್ದಾರೆ. ಅಂತರರಾಷ್ಟ್ರೀಯ ಚೆಸ್ ಫೆಡರೇಶನ್#FIDE ನಿಯಮಗಳ ಪ್ರಕಾರ, ವಿಶ್ವಕಪ್‌ನಲ್ಲಿ ಅಗ್ರ ಮೂರು ಆಟಗಾರರು ಈ ಪಂದ್ಯಾವಳಿಗೆ ಅರ್ಹತೆ ಪಡೆಯುತ್ತಾರೆ.

ಆರ್ ಪ್ರಜ್ಞಾನಂದ  ಮೂಲತಃ ತಮಿಳುನಾಡಿನ ಚೆನ್ನೈ#Chennaiಯವರು. ಆಗಸ್ಟ್ 10, 2005ರಲ್ಲಿ ಜನಿಸಿದರು. 2016 ರಲ್ಲಿ 10 ವರ್ಷಗಳು, 10 ತಿಂಗಳುಗಳು ಮತ್ತು 19 ದಿನಗಳ ವಯಸ್ಸಿನಲ್ಲಿ ಕಿರಿಯ ಅಂತರರಾಷ್ಟ್ರೀಯ ಮಾಸ್ಟರ್ ಆಗುವ ಮೂಲಕ ವಿಶ್ವ ಮಟ್ಟದಲ್ಲಿ ದಾಖಲೆಯನ್ನು ನಿರ್ಮಿಸಿದ ಕೀರ್ತಿ ಇವರದ್ದು. ನಂತರದಲ್ಲಿ 2018ರಲ್ಲಿ ಗ್ರ್ಯಾಂಡ್ಮಾಸ್ಟರ್ ಆಗಿ ಹೊರ ಹೊಮ್ಮಿದ್ದರು. ಇವರ FIDE ರೇಟಿಂಗ್ 2612 ಇದ್ದು, ಜುಲೈ 2019 ರಲ್ಲಿ ಡೆನ್ಮಾರ್ಕ್​​ನಲ್ಲಿ ನಡೆದ ಎಕ್ಸ್ಟ್ರಾಕಾನ್ ಚೆಸ್ ಓಪನ್​ನಲ್ಲೂ ಪರಾಕ್ರಮ ಮೆರೆದಿದ್ದರು. ಇಲ್ಲಿ 8½/10 ಅಂಕಗಳನ್ನು (+7–0=3) ಗಳಿಸಿದರು. ಅಲ್ಲದೇ 18 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವ ಯುವ ಚಾಂಪಿಯನ್‌ ಶಿಪ್‌ ಗಳನ್ನು 9/11 ಅಂಕಗಳೊಂದಿಗೆ ಜಯಿಸಿದ ಸಾಧನೆ ಮಾಡಿದ್ದಾರೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group