ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ- ಟ್ರಾಯ್ ದೆಹಲಿಯಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಕೇಂದ್ರ ಸಂವಹನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಪಾಲ್ಗೊಂಡಿದ್ದರು. ಬಳಿಕ ಅವರು, ಭಾರತ ಮುಂದಿನ ಪೀಳಿಗೆಗೆ ಉಪಗ್ರಹ ಸಂವಹನದ ಸೇವೆಗಳನ್ನು ದೇಶದ ಮೂಲೆ ಮೂಲೆಗೂ ತಲುಪಿಸಲು ಸಿದ್ಧವಿದ್ದು, 2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ ಡಾಲರ್ ಗೆ ತಲುಪುವ ನಿರೀಕ್ಷೆಯಿದೆ. ಭಾರತ ಕೇವಲ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದಷ್ಟೇ ಅಲ್ಲದೇ, ಅವುಗಳನ್ನು ಸಾರ್ವತ್ರಿಕವಾಗಿ, ಅರ್ಥಪೂರ್ಣವಾಗಿ ರೂಪಿಸುತ್ತದೆ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel