ಕೇಂದ್ರ ಸರ್ಕಾರದ ಸ್ವಾಮ್ಯದ ಬಿಎಸ್ಎನ್ಎಲ್ ಈ ವರ್ಷದ ಆಗಸ್ಟ್ ತಿಂಗಳೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ ಅಭಿವೃದ್ಧಿಪಡಿಸಿರುವ ನೆಟ್‌ವರ್ಕ್ ತಂತ್ರಜ್ಞಾನವನ್ನು ಬಿಎಸ್ಎನ್ಎಲ್ಗೆ ಅವಳಡಿಸಲಾಗುತ್ತಿದೆ.
ಆಗಸ್ಟ್ 15 ರ ಸ್ವಾತಂತ್ರ್ಯೋತ್ಸವದೊಳಗೆ ಬಿಎಸ್ಎನ್ಎಲ್ 4ಜಿ ನೆಟ್‌ವರ್ಕ್ ಸೇವೆಗಳನ್ನು ಹೊಂದಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಅಲ್ಲದೇ, ದೇಶದ ಇತರ ಖಾಸಗಿ ಕಂಪನಿಗಳಂತೆ ಸಂಸ್ಥೆ 5ಜಿ ತರಂಗಾಂತರ ಹೊಂದುವಂತೆ ಆಗಬೇಕೆಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.
ನೆಟ್‌ವರ್ಕ್ ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಟೆಲಿಕಾಂ ದೈತ್ಯರು ಶತಕೋಟಿ ಡಾಲರ್ಗಳನ್ನು ಹೂಡಿಕೆ ಮಾಡಿದ್ದು, ಸುಮಾರು 30 ಮಿಲಿಯನ್ ಡಾಲರ್ ವೆಚ್ಚದಲ್ಲಿ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯವನ್ನು ನಾವು ಪೂರ್ಣಗೊಳಿಸಲಿದ್ದೇವೆ. ಶೀಘ್ರದಲ್ಲೇ ಈ ನೆಟ್ವರ್ಕ್ ಅನ್ನು ಬಿಎಸ್ಎನ್ಎಲ್ ನೆಟ್‌ವರ್ಕ್‌ನಲ್ಲಿ ನಿಯೋಜಿಸಲಾಗುವುದು ಎಂದು ಸಿ-ಡಾಟ್ನ ಕಾರ್ಯನಿರ್ವಾಹಕ ನಿರ್ದೇಶಕ ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…