ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…
ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…