ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವು ತನ್ನ ಮೆನುವಿನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ಹಾಗೂ ಪಲ್ಯವನ್ನು ಸೇರಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಜನರು ಹತ್ತಿರದ ಇಂದಿರಾ ಕ್ಯಾಂಟೀನ್‌ಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುವ ಅಪ್ಲಿಕೇಶನ್ ಅನ್ನೂ ಸಹ ಪ್ರಾರಂಭಿಸಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸರ್ಕಾರ 200 ರಿಂದ 250 ಕೋಟಿ ಬಜೆಟ್ ಮೀಸಲಿಡುವ ಸಾಧ್ಯತೆ ಇದೆ.
ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವಂತೆ ಮತ್ತು ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕ್ ಚಂದ್ರ ಕೆ ವಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ, ಸಂಚಾರಿ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಿ ವರದಿ ಸಲ್ಲಿಸುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ.
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…