ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

April 29, 2024
12:14 PM

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ.

ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಸುಕಿನ ಜಾವ 1.27 ರ ಸುಮಾರಿಗೆ  ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್‌ ಅವರು ಕಳೆದ  ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror