ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ‘ಮೇವು ಮೇಳ’ ಆಯೋಜಿಸಲಾಗಿತ್ತು. ಈ ಮೂಲಕ ಹೈನುಗಾರರಿಗೆ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ.ಸಿ. ವೀರಣ್ಣ ಮೇವು ಮೇಳಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮೇವಿನ ಬೀಜ ಸೇರಿದಂತೆ ಇನ್ನಿತರ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮತ್ತು ರೈತರು ಮಳಿಗೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.
ಮೇವಿನ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮೇವು ಬೆಳೆಯುವ ಬೀಜಗಳು ಸೇರಿದಂತೆ ಮೇವಿಗೆ ಸಂಬಂಧಿಸಿದ ಇನ್ನಿತರ ಬೇರು ಉತ್ಪಾದನೆ ಹಾಗೂ ಮೇವಿನ ಬೀಜದಿಂದ ಹೆಚ್ಚು ಇಳುವರಿ ಪಡೆಯುವ ಕುರಿತು ಈ ಮೇಳ ಬೆಳಕು ಚೆಲ್ಲಲಿದೆ. ರೈತರಿಗೆ ಹಾಗೂ ಹೈನುಗಾರರಿಗೆ ಅನುಕೂಲವಾಗಲಿದೆ ಎಂದು ಪ್ರೊ. ಕೆ. ಸಿ. ವೀರಣ್ಣ ಹೇಳಿದರು.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…