ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433 ಯನ್ನು ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ. ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಅಭಿವೃದ್ಧಿಪಡಿಸಿರುವ ಸಿಡಿಲು ಆಪ್‌ನಲ್ಲಿ ಪಡೆಯಬಹುದು. ಅಥವಾ ಎನ್‌ಡಿಎಂಎ ಅಭಿವೃದ್ಧಿಪಡಿಸಿರುವ ದಾಮಿನಿ ಆಪ್ ಅಳವಡಿಸಿಕೊಳ್ಳಬಹುದು. ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆಯಿದೆ ಎಂಬುದರ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಪಡೆಯಬಹುದು. ಸಿಡಿಲಿನ ಅಪಾಯದಿಂದ ತಪ್ಪಿಸಿಕೊಳ್ಳಲು ಅಗತ್ಯ ಸಲಹೆ, ಸೂಚನೆಗಳನ್ನು ಆಪ್‌ನಲ್ಲಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel