ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನೆಲೆಸಿದ್ದು ಇವರ ಬಗ್ಗೆ ಮಾಲಿಕರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಸೂಚಿಸಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ನಡೆದ ಕಾಫಿ ಮಂಡಳಿ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕಾಗಿ ಉತ್ತರ ಭಾರತದಿಂದ ಹಾಗೂ ಇತರೆ ರಾಜ್ಯಗಳಿಂದ ಕಾರ್ಮಿಕರು ಬಂದು ನೆಲೆಸಿದ್ದಾರೆ. ಕಾರ್ಮಿಕರ ಅಧಾರ್ ಕಾರ್ಡ್ ಇತರೆ ಗುರುತಿನ ಚೀಟಿಗಳನ್ನು ಮಾಲಿಕರು ಪಡೆದುಕೊಳ್ಳಬೇಕು. ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಕಾರ್ಮಿಕರ ಪೂರ್ವ ಪರ ವಿಚಾರಿಸಬೇಕು ಮತ್ತು ಕಾರ್ಮಿಕರ ಬಗ್ಗೆ ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel