ಕೋಲಾರದಲ್ಲಿ ಹಾಲು ಉತ್ಪಾದಕರಿಗೆ 2 ರೂ. ಕಡಿತ | ಇಂದಿನಿಂದಲೇ ಜಾರಿ, ಹಾಲು ಉತ್ಪಾದಕರು ಕಂಗಾಲು

July 5, 2024
12:12 PM

ಕಳೆದ ವಾರ ರಾಜ್ಯ ಸರ್ಕಾರ(State Govt) ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿ ರಾಜ್ಯದ ಜನರಿಗೆ ಹಾಲಿಗೆ ಧಾರಣೆ ಹೆಚ್ಚಳ ಎನ್ನುವ ಭಾವನೆ ಮೂಡಿಸಿತ್ತು.  ಆದರೆ ಈ ಏರಿಕೆಯಲ್ಲಿ ರೈತರಿಗೆ ಪ್ರಯೋಜನ ದೊರೆಯಲಿದೆ ಎಂದು ಹೇಳಿ ಸಮಾಧಾನಗೊಳಿಸಲಾಗಿತ್ತು. ಆದರೆ ಇದೀಗ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (KOCHIMUL) ರೈತರಿಗೆ ಬಿಸಿ ಮುಟ್ಟಿಸಿದೆ. 

Advertisement
Advertisement
Advertisement

ಕೋಚಿಮುಲ್ ಆಡಳಿತ ಮಂಡಳಿ ದಿಢೀರ್‌ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು, ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ. ಈ ಮೊದಲು ಪ್ರತಿ ಲೀಟರ್‌ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್‌ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ.

Advertisement

ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್‌ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror