ಕಳೆದ ವಾರ ರಾಜ್ಯ ಸರ್ಕಾರ(State Govt) ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿ ರಾಜ್ಯದ ಜನರಿಗೆ ಹಾಲಿಗೆ ಧಾರಣೆ ಹೆಚ್ಚಳ ಎನ್ನುವ ಭಾವನೆ ಮೂಡಿಸಿತ್ತು. ಆದರೆ ಈ ಏರಿಕೆಯಲ್ಲಿ ರೈತರಿಗೆ ಪ್ರಯೋಜನ ದೊರೆಯಲಿದೆ ಎಂದು ಹೇಳಿ ಸಮಾಧಾನಗೊಳಿಸಲಾಗಿತ್ತು. ಆದರೆ ಇದೀಗ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (KOCHIMUL) ರೈತರಿಗೆ ಬಿಸಿ ಮುಟ್ಟಿಸಿದೆ.
ಕೋಚಿಮುಲ್ ಆಡಳಿತ ಮಂಡಳಿ ದಿಢೀರ್ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು, ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ. ಈ ಮೊದಲು ಪ್ರತಿ ಲೀಟರ್ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ.
ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
– ಅಂತರ್ಜಾಲ ಮಾಹಿತಿ
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…