ಸುದ್ದಿಗಳು

ಮೊದಲ ಬಾರಿಗೆ ಕಾರವಾರಕ್ಕೆ ಬಂದ ಐಎನ್‌ಎಸ್‌ ವಿಕ್ರಾಂತ್‌ – ಇಲ್ಲಿಗೆ ಬರಲು ಕಾರಣ ಏನು..??

Share

ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಎಂದೇ ಹೆಗ್ಗುರುತಿಗೆ ಪಾತ್ರವಾಗಿರುವ ಐಎನ್ಎಸ್ ವಿಕ್ರಾಂತ್ ಕದಂಬ ನೌಕಾನೆಲೆಯ ಜಟ್ಟಿಗೆ  ಮೊದಲ ಬಾರಿ ಆಗಮಿಸಿದೆ.

Advertisement
Advertisement

ಈ ಹಿಂದೆ ವಿಕ್ರಾಂತ್ ಹಡಗು ಕೊಚ್ಚಿಯಲ್ಲಿಯೇ ಇದ್ದು ನಂತರ ಅರಬ್ಬಿ ಸಮುದ್ರದಲ್ಲಿ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಿತ್ತು. ಇದೀಗ ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಯಶಸ್ವಿಯಾಗಿ ನಿಲುಗಡೆಯಾಗಿರುವ ವಿಕ್ರಾಂತ್‌ ಒಂದು ತಿಂಗಳ ಕಾಲ ಇಲ್ಲಿಯೇ ಇರಲಿದೆ. ನಂತರ ಇಂಧನ, ಆಹಾರ ತುಂಬಿಕೊಂಡು ಪೂರ್ವ ಹಾಗೂ ಪಶ್ಚಿಮ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸಲಿದೆ.

ಐಎನ್ಎಸ್ ವಿಕ್ರಾಂತ್ ವಿಶೇಷತೆ ಏನು?
ಕೊಚ್ಚಿಯ ಹಡಗು ಕಾರ್ಖಾನೆಯಲ್ಲಿ 2000 ತಂತ್ರಜ್ಞರು, 13 ವರ್ಷಗಳಿಂದ ಕೆಲಸ ಮಾಡಿ ನಿರ್ಮಾಣ ಮಾಡಿದ ಯುದ್ಧನೌಕೆ ಇದಾಗಿದ್ದು, ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದರು.

40 ಸಾವಿರ ಟನ್‌ ತೂಕದ 23 ಸಾವಿರ ಕೋಟಿ ರೂ. ಹಣ ವ್ಯಯಿಸಿ ಯುದ್ಧವಿಮಾನ ವಾಹಕ ನೌಕೆಯನ್ನು ಸ್ವದೇಶಿ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಿಸುವ ಮೂಲಕ ವಿಶ್ವದ 6 ಪ್ರಮುಖ ರಾಷ್ಟ್ರಗಳ ಸಾಲಿಗೆ ಭಾರತ ಸೇರಿದೆ. ಈ ಹಿಂದೆ ಅಮೆರಿಕ, ರಷ್ಯಾ, ಚೀನಾ, ಫ್ರಾನ್ಸ್‌, ಇಂಗ್ಲೆಂಡ್‌, ಇಟಲಿ ಮಾತ್ರವೇ ಈ ಸಾಧನೆಗೈದಿದ್ದವು.

Advertisement

ಉದ್ದ 262 ಮೀಟರ್‌, ಅಗಲ 62 ಮೀಟರ್‌, ಎತ್ತರ- 59 ಮೀಟರ್‌ ಹೊಂದಿರುವ ಯುದ್ಧ ನೌಕೆಯಲ್ಲಿ 18 ಮಹಡಿಗಳಿದ್ದು 2,400 ವಿಭಾಗಗಳು ಇವೆ. ಒಂದೇ ಬಾರಿಗೆ 1600 ನೌಕಾ ಸಿಬ್ಬಂದಿಯನ್ನು ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ನಿಯೋಜಿಸಬಹುದಾಗಿದೆ.

ಮಿಗ್‌- 29 ಕೆ, ಕಮೋವ್‌- 31 ಹೆಲಿಕಾಪ್ಟರ್‌ಗಳು, ಅಮೆರಿಕ ನಿರ್ಮಿತ ಎಫ್‌-18ಎ ಸೂಪರ್‌ ಹಾರ್ನೆಟ್‌, ಫ್ರಾನ್ಸ್‌ ನಿರ್ಮಿತ ರಫೇಲ್‌ ಯುದ್ಧ ವಿಮಾನಗಳು, ಫೈಟರ್‌ ಜೆಟ್‌ ಎಂಎಚ್‌- 60 ರೋಮಿಯೊ ಮಲ್ಟಿರೋಲ್‌ ಹೆಲಿಕಾಪ್ಟರ್‌ಗಳು,  32 ಮಧ್ಯಮ ಶ್ರೇಣಿಯ ಮೇಲ್ಮೈಯಿಂದ ಚಿಮ್ಮುವ ವಾಯು ಕ್ಷಿಪಣಿಗಳು ಮತ್ತು ಎಕೆ- 630 ಫಿರಂಗಿ ಗನ್‌ಗಳೂ ವಿಕ್ರಾಂತ್‌ ಬತ್ತಳಿಕೆಯಲ್ಲಿದೆ.

ಇದರ ರನ್‌ ವೇ 262 ಮೀಟರ್‌ಗಳಷ್ಟು ಉದ್ದವಿದೆ. ಬರೋಬ್ಬರಿ 2 ಫುಟ್ಬಾಲ್‌ ಮೈದಾನದಷ್ಟು ದೊಡ್ಡದಾಗಿದೆ.  2 ಒಲಿಂಪಿಕ್ಸ್‌ ಈಜುಕೊಳಗಳನ್ನು ನಿರ್ಮಿಸಬಹುದಾದಷ್ಟು ಉದ್ದವಾದ ರನ್‌ವೇ ಹೊಂದಿದೆ.

2,500 ಕಿ.ಮೀ. ಉದ್ದದ ವಿದ್ಯುತ್‌ ಕೇಬಲ್‌ ವಿಕ್ರಾಂತ್‌ನ ಒಡಲೊಳಗಿದೆ. ಇದರ ಅಡುಗೆಮನೆಯಲ್ಲಿ ಒಂದೇ ದಿನದಲ್ಲಿ 4,800 ಜನರಿಗೆ ಅಡುಗೆ ಸಿದ್ಧಪಡಿಸಬಹುದು. 1 ಗಂಟೆಯಲ್ಲಿ 3 ಸಾವಿರ ಚಪಾತಿ ಮಾಡುವ, ಇಡ್ಲಿ ಬೇಯಿಸುವ ಅತ್ಯಾಧುನಿಕ ಯಂತ್ರಳಿವೆ.

Advertisement

ಈ ನೌಕೆ ಗಂಟೆಗೆ 33 ಕಿ.ಮೀ. ವೇಗದಲ್ಲಿ ಚಲಿಸಿ, ಒಂದೇ ಬಾರಿಗೆ 7,500 ನಾಟಿಕಲ್‌ ಮೈಲು ಕ್ರಮಿಸಬಲ್ಲದು. 250 ಟ್ಯಾಂಕರ್‌ಗಳಷ್ಟು ಇಂಧನ ಇದರಲ್ಲಿರುತ್ತದೆ. ಸಿಬ್ಬಂದಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು 16 ಬೆಡ್‌ಗಳ ಆಸ್ಪತ್ರೆ ಕೂಡ ಇದೆ.

2025ಕ್ಕೆ ದೇಶಕ್ಕೆ ಸಮರ್ಪಣೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಕದಂಬ ನೌಕಾನೆಲೆಯು ಏಷ್ಯಾದಲ್ಲೇ ಅತೀ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಭೂ ಪ್ರದೇಶ ವೈರಿಗಳಿಗೆ ಚಿತ್ತ ಕಾಣದಂತೆ ಮಾಡಿ ಶತ್ರುಗಳ ಮೇಲೆ ಮುಗಿಬೀಳಲು ಸುವ್ಯವಸ್ಥಿತ ನೌಕಾ ತಾಣವಾಗಿ ಮಾರ್ಪಡುತಿದ್ದು ಇದೀಗ ನೌಕಾ ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿದೆ. ಒಂದು ಲಕ್ಷ ಸಿಬ್ಬಂದಿಗೆ ವಸತಿ ನಿಲಯ ,ಕಚೇರಿ ಸಂಕೀರ್ಣ, ರಿಪೇರಿ ಯಾರ್ಡ್‌ಗಳು ಈಗಾಗಲೇ ನಿರ್ಮಾಣದ ಅಂತಿಮ ಹಂತ ತಲುಪಿದ್ದು ನೌಕಾ ದಳದ ಮಾಹಿತಿ ಪ್ರಕಾರ 2025ರ ವೇಳೆಗೆ ದೇಶಕ್ಕೆ ಸಮರ್ಪಣೆಗೊಳ್ಳಲಿದೆ.

ಯಶಸ್ವಿಯಾಗಿ ನಿಲುಗಡೆಯಾಗಿರುವ ವಿಕ್ರಾಂತ್‌ ಒಂದು ತಿಂಗಳ ಕಾಲ ಇಲ್ಲಿಯೇ ಇರಲಿದೆ. ನಂತರ ಇಂಧನ, ಆಹಾರ ತುಂಬಿಕೊಂಡು ಪೂರ್ವ ಹಾಗೂ ಪಶ್ಚಿಮ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸಲಿದೆ.

ಏಷ್ಯಾದ ಅತೀ ದೊಡ್ಡ ನೌಕಾ ನೆಲೆ ಎಂದೇ ಪ್ರಸಿದ್ಧಿ ಪಡೆದಿರುವ ಕದಂಬದಲ್ಲಿ ಈಗಾಗಲೇ 40 ಯುದ್ದ ಹಡಗುಗಳು, ಜಲಾಂತರ್ಗಾಮಿ ನೌಕೆ ನಿಲ್ಲುವಷ್ಟು ವ್ಯವಸ್ಥೆ ಕಲ್ಪಿಸಲಾಗಿದೆ. ದೇಶದ ಮೊದಲ ಹಡಗುಗಳನ್ನು ರಿಪೇರಿ ಮಾಡಲು ಸಮುದ್ರದಿಂದಲೇ ಮೇಲೆತ್ತಿ ದಡಕ್ಕೆ ತರುವ  ʼಟ್ರಾಲಿ ಶಿಪ್ಟಿಂಗ್ ಸಿಸ್ಟಮ್ʼತಂತ್ರಜ್ಞಾನ ಇಲ್ಲಿರುವುದು ವಿಶೇಷ.

Advertisement

ಸೀ ಬರ್ಡ್‌ ಸ್ಟೇಜ್ -1 ರಲ್ಲಿ ಮೂರು ಜಟ್ಟಿಗಳು ನಿರ್ಮಾಣಗೊಂಡಿದ್ದವು. ಆದರೆ ಸ್ಟೇಜ್-2 ನಲ್ಲಿ ಮತ್ತೆ ಮೂರು ಜಟ್ಟಿಗಳನ್ನು ನಿರ್ಮಾಣ ಮಾಡಲಾಗಿದ್ದು ಎರಡು ಜಟ್ಟಿಯಲ್ಲಿ ಏಷ್ಯಾದ ಅತೀ ದೊಡ್ಡ ಯುದ್ಧ ಹಡಗು ನಿಲುಗಡೆ ಮಾಡಬಹುದಾಗಿದೆ. ಈ ಕಾರಣಕ್ಕೆ ವಿಕ್ರಮಾದಿತ್ಯ ಹಾಗೂ ವಿಕ್ರಾಂತ್ ಯುದ್ದ ವಿಮಾನ ವಾಹಕಗಳಿಗೆ ಇಲ್ಲಿ ಸ್ಥಳಾವಕಾಶ ಮಾಡಿಕೊಡಲಾಗಿದೆ.

ಐಎನ್ಎಸ್ ವಿಕ್ರಾಂತ್ ವಿಶೇಷತೆ ಏನು?
ಕೊಚ್ಚಿಯ ಹಡಗು ಕಾರ್ಖಾನೆಯಲ್ಲಿ 2000 ತಂತ್ರಜ್ಞರು, 13 ವರ್ಷಗಳಿಂದ ಕೆಲಸ ಮಾಡಿ ನಿರ್ಮಾಣ ಮಾಡಿದ ಯುದ್ಧನೌಕೆ ಇದಾಗಿದ್ದು, ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದರು.

40 ಸಾವಿರ ಟನ್‌ ತೂಕದ 23 ಸಾವಿರ ಕೋಟಿ ರೂ. ಹಣ ವ್ಯಯಿಸಿ ಯುದ್ಧವಿಮಾನ ವಾಹಕ ನೌಕೆಯನ್ನು ಸ್ವದೇಶಿ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಿಸುವ ಮೂಲಕ ವಿಶ್ವದ 6 ಪ್ರಮುಖ ರಾಷ್ಟ್ರಗಳ ಸಾಲಿಗೆ ಭಾರತ ಸೇರಿದೆ. ಈ ಹಿಂದೆ ಅಮೆರಿಕ, ರಷ್ಯಾ, ಚೀನಾ, ಫ್ರಾನ್ಸ್‌, ಇಂಗ್ಲೆಂಡ್‌, ಇಟಲಿ ಮಾತ್ರವೇ ಈ ಸಾಧನೆಗೈದಿದ್ದವು.

ಉದ್ದ 262 ಮೀಟರ್‌, ಅಗಲ 62 ಮೀಟರ್‌, ಎತ್ತರ- 59 ಮೀಟರ್‌ ಹೊಂದಿರುವ ಯುದ್ಧ ನೌಕೆಯಲ್ಲಿ 18 ಮಹಡಿಗಳಿದ್ದು 2,400 ವಿಭಾಗಗಳು ಇವೆ. ಒಂದೇ ಬಾರಿಗೆ 1600 ನೌಕಾ ಸಿಬ್ಬಂದಿಯನ್ನು ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ನಿಯೋಜಿಸಬಹುದಾಗಿದೆ.

Advertisement

ಮಿಗ್‌- 29 ಕೆ, ಕಮೋವ್‌- 31 ಹೆಲಿಕಾಪ್ಟರ್‌ಗಳು, ಅಮೆರಿಕ ನಿರ್ಮಿತ ಎಫ್‌-18ಎ ಸೂಪರ್‌ ಹಾರ್ನೆಟ್‌, ಫ್ರಾನ್ಸ್‌ ನಿರ್ಮಿತ ರಫೇಲ್‌ ಯುದ್ಧ ವಿಮಾನಗಳು, ಫೈಟರ್‌ ಜೆಟ್‌ ಎಂಎಚ್‌- 60 ರೋಮಿಯೊ ಮಲ್ಟಿರೋಲ್‌ ಹೆಲಿಕಾಪ್ಟರ್‌ಗಳು,  32 ಮಧ್ಯಮ ಶ್ರೇಣಿಯ ಮೇಲ್ಮೈಯಿಂದ ಚಿಮ್ಮುವ ವಾಯು ಕ್ಷಿಪಣಿಗಳು ಮತ್ತು ಎಕೆ- 630 ಫಿರಂಗಿ ಗನ್‌ಗಳೂ ವಿಕ್ರಾಂತ್‌ ಬತ್ತಳಿಕೆಯಲ್ಲಿದೆ.

ಇದರ ರನ್‌ ವೇ 262 ಮೀಟರ್‌ಗಳಷ್ಟು ಉದ್ದವಿದೆ. ಬರೋಬ್ಬರಿ 2 ಫುಟ್ಬಾಲ್‌ ಮೈದಾನದಷ್ಟು ದೊಡ್ಡದಾಗಿದೆ.  2 ಒಲಿಂಪಿಕ್ಸ್‌ ಈಜುಕೊಳಗಳನ್ನು ನಿರ್ಮಿಸಬಹುದಾದಷ್ಟು ಉದ್ದವಾದ ರನ್‌ವೇ ಹೊಂದಿದೆ.

2,500 ಕಿ.ಮೀ. ಉದ್ದದ ವಿದ್ಯುತ್‌ ಕೇಬಲ್‌ ವಿಕ್ರಾಂತ್‌ನ ಒಡಲೊಳಗಿದೆ. ಇದರ ಅಡುಗೆಮನೆಯಲ್ಲಿ ಒಂದೇ ದಿನದಲ್ಲಿ 4,800 ಜನರಿಗೆ ಅಡುಗೆ ಸಿದ್ಧಪಡಿಸಬಹುದು. 1 ಗಂಟೆಯಲ್ಲಿ 3 ಸಾವಿರ ಚಪಾತಿ ಮಾಡುವ, ಇಡ್ಲಿ ಬೇಯಿಸುವ ಅತ್ಯಾಧುನಿಕ ಯಂತ್ರಳಿವೆ.

ಈ ನೌಕೆ ಗಂಟೆಗೆ 33 ಕಿ.ಮೀ. ವೇಗದಲ್ಲಿ ಚಲಿಸಿ, ಒಂದೇ ಬಾರಿಗೆ 7,500 ನಾಟಿಕಲ್‌ ಮೈಲು ಕ್ರಮಿಸಬಲ್ಲದು. 250 ಟ್ಯಾಂಕರ್‌ಗಳಷ್ಟು ಇಂಧನ ಇದರಲ್ಲಿರುತ್ತದೆ. ಸಿಬ್ಬಂದಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು 16 ಬೆಡ್‌ಗಳ ಆಸ್ಪತ್ರೆ ಕೂಡ ಇದೆ.

Advertisement

2025ಕ್ಕೆ ದೇಶಕ್ಕೆ ಸಮರ್ಪಣೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಕದಂಬ ನೌಕಾನೆಲೆಯು ಏಷ್ಯಾದಲ್ಲೇ ಅತೀ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಭೂ ಪ್ರದೇಶ ವೈರಿಗಳಿಗೆ ಚಿತ್ತ ಕಾಣದಂತೆ ಮಾಡಿ ಶತ್ರುಗಳ ಮೇಲೆ ಮುಗಿಬೀಳಲು ಸುವ್ಯವಸ್ಥಿತ ನೌಕಾ ತಾಣವಾಗಿ ಮಾರ್ಪಡುತಿದ್ದು ಇದೀಗ ನೌಕಾ ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿದೆ. ಒಂದು ಲಕ್ಷ ಸಿಬ್ಬಂದಿಗೆ ವಸತಿ ನಿಲಯ ,ಕಚೇರಿ ಸಂಕೀರ್ಣ, ರಿಪೇರಿ ಯಾರ್ಡ್‌ಗಳು ಈಗಾಗಲೇ ನಿರ್ಮಾಣದ ಅಂತಿಮ ಹಂತ ತಲುಪಿದ್ದು ನೌಕಾ ದಳದ ಮಾಹಿತಿ ಪ್ರಕಾರ 2025ರ ವೇಳೆಗೆ ದೇಶಕ್ಕೆ ಸಮರ್ಪಣೆಗೊಳ್ಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

9 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

9 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

9 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

9 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

9 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

10 hours ago