ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

August 9, 2025
7:48 PM

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟಿಲ್ ಸೂಚನೆ ನೀಡಿದ್ದಾರೆ.

ವಿಜಯಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು. ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಜಿಪಿಎಸ್ ಫೋಟೋ ಬಳಸಿ ಯಾವುದೇ ರೈತರಿಂದ ದೂರು ಬರದಂತೆ ನೋಡಿಕೊಂಡು ಎಚ್ಚರಿಕೆ ವಹಿಸಬೇಕು. ಯಾವುದೇ ರೈತರಿಂದ ದೂರುಗಳು ಬಂದಲ್ಲಿ  ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಎಚ್ಚರಿಕೆ ವಹಿಸಿ, ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.  ಜಿಲ್ಲೆಯ ಆಲಮಟ್ಟಿ ಜಲಾಶಯಲ್ಲಿ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದಿಂದ ನೀರು ಹೊರಬಿಡಲಾಗುತ್ತಿದೆ.  ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕೆರೆಗಳನ್ನು ತುಂಬಿಸಲು ಈ ನೀರನ್ನು ಬಳಸಿಕೊಂಡು ಕೆರೆ ತುಂಬಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಾಳೆ ಉಡಾವಣೆಯಾಗಲಿದೆ ಭಾರತದ ನ್ಯಾವಿಗೇಷನ್ ಉಪಗ್ರಹ NVS-03: ರಾತ್ರಿ 11.51ಕ್ಕೆ GSLV-F18 ರಾಕೆಟ್ ಉಡಾವಣೆ
October 29, 2026
10:59 PM
by: ದ ರೂರಲ್ ಮಿರರ್.ಕಾಂ
ದುರ್ಬಲಗೊಂಡ ಅರ್ನಬ್ ಚಂಡಮಾರುತ – ಮುಂದಿನ 48 ಗಂಟೆಗಳಲ್ಲಿ ಏನಾಗಲಿದೆ?
October 29, 2026
10:42 PM
by: ದ ರೂರಲ್ ಮಿರರ್.ಕಾಂ
ನಂದಿನಿ ಹಾಲಿನ ದರ ಲೀಟರ್‌ಗೆ ₹8 ಏರಿಕೆ – ನ.1ರಿಂದ ಹೊಸ ದರ ಜಾರಿ
October 29, 2026
10:30 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ – ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಕೃಷಿಕ ಸಮಾಜ ಒತ್ತಾಯ
October 29, 2026
8:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror