ಮಂಡ್ಯ ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿಎಪಿ, ಎಂಓಪಿ, ಎಸ್ಎಸ್ ಪಿ, ಕಾಂಪ್ಲೆಕ್ಸ್ ಸೇರಿದಂತೆ 24471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ರಸಗೊಬ್ಬರ ಸಮರ್ಪಕವಾಗಿ ನಿರ್ವಹಣೆ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕುವಾರು ತಹಶೀಲ್ದಾರ್ ಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರ ದಾಸ್ತಾನುಗಳ ಉಳಿಕೆ , ಗೊಬ್ಬರಗಳ ದರ ನಮೂದಿಸಿರುವ ಬಗ್ಗೆ ಪರಿಶೀಲಿಸಿಸುವಂತೆ ತಿಳಿಸಿದ್ದಾರೆ. ಕಾಳಸಂತೆ ಹಾಗೂ ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….

