ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಜೆಸ್ಕಾಂನ ವಿದ್ಯುತ್ ಮೀಟರ್ ರೀಡರ್‌ಗಳು ಮನೆ ಮನೆಗೆ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಮೀಕ್ಷೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ವಾಸದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದನ್ನು ಖಾತ್ರಿ ಪಡಿಸಿಕೊಂಡು, ಆರ್‌ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಬೇಕು. ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾವಹಿಸಬೇಕು. ಮೀಟರ್ ನಂಬರ್ ಇಲ್ಲದ ಅಲೆಮಾರಿ, ಅರೆ ಅಲೆಮಾರಿ ವಾಸಸ್ಥಳ ಮತ್ತು ಕೊಳಚೆ ಪ್ರದೇಶಗಳ, ಅರಣ್ಯ ಪ್ರದೇಶಗಳ ಪ್ರತಿ ಕುಟುಂಬದ ಸಂಖ್ಯೆ ಯುಎಚ್‌ಐಡಿ ಸೃಜಿಸಬೇಕು ಎಂದರು. ಇಂಧನ ಇಲಾಖೆ ಮೀಟರ್ ರೀಡರ್‌ಗಳು ಆರ್.ಆರ್ ನಂಬರ್ ಪ್ರಕಾರ ಜಿಯೋ ಟ್ಯಾಗಿಂಗ್ ಸ್ಟಿಕರ್ ಅಂಟಿಸುವ ಕಾರ್ಯ ಆರಂಭಿಸಿದೆ. ಇದಾದ ನಂತರ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲು 150 ಕುಟುಂಬಕ್ಕೆ ಒಬ್ಬ ಗಣತಿದಾರರಂತೆ 2 ಸಾವಿರಕ್ಕೂ ಹೆಚ್ಚು ಗಣತಿದಾರರನ್ನು ನಿಯೋಜನೆ ಮಾಡಲಾಗುವುದು. ಪ್ರತಿ 20 ಗಣತಿದಾರಿಗೆ ಒಬ್ಬರು ಮೇಲ್ವಿಚಾರಕರನ್ನು ಮತ್ತು ಜಿಲ್ಲೆಗೆ 50 ಮಾಸ್ಟರ್ ಟ್ರೈನರ್ ಗಳನ್ನು ಗುರುತಿಸಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

