Advertisement
MIRROR FOCUS

ಮನೆ ಮನೆಗೆ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚನೆ

Share

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಜೆಸ್ಕಾಂನ ವಿದ್ಯುತ್ ಮೀಟರ್ ರೀಡರ್‌ಗಳು ಮನೆ ಮನೆಗೆ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಮೀಕ್ಷೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ವಾಸದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದನ್ನು ಖಾತ್ರಿ ಪಡಿಸಿಕೊಂಡು, ಆರ್‌ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಬೇಕು. ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾವಹಿಸಬೇಕು. ಮೀಟರ್ ನಂಬರ್ ಇಲ್ಲದ ಅಲೆಮಾರಿ, ಅರೆ ಅಲೆಮಾರಿ ವಾಸಸ್ಥಳ ಮತ್ತು ಕೊಳಚೆ ಪ್ರದೇಶಗಳ, ಅರಣ್ಯ ಪ್ರದೇಶಗಳ ಪ್ರತಿ ಕುಟುಂಬದ ಸಂಖ್ಯೆ ಯುಎಚ್‌ಐಡಿ ಸೃಜಿಸಬೇಕು ಎಂದರು. ಇಂಧನ ಇಲಾಖೆ ಮೀಟರ್ ರೀಡರ್‌ಗಳು ಆರ್.ಆರ್ ನಂಬರ್ ಪ್ರಕಾರ ಜಿಯೋ ಟ್ಯಾಗಿಂಗ್ ಸ್ಟಿಕರ್ ಅಂಟಿಸುವ ಕಾರ್ಯ ಆರಂಭಿಸಿದೆ. ಇದಾದ ನಂತರ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲು 150 ಕುಟುಂಬಕ್ಕೆ ಒಬ್ಬ ಗಣತಿದಾರರಂತೆ 2 ಸಾವಿರಕ್ಕೂ ಹೆಚ್ಚು ಗಣತಿದಾರರನ್ನು ನಿಯೋಜನೆ ಮಾಡಲಾಗುವುದು. ಪ್ರತಿ 20 ಗಣತಿದಾರಿಗೆ ಒಬ್ಬರು ಮೇಲ್ವಿಚಾರಕರನ್ನು ಮತ್ತು ಜಿಲ್ಲೆಗೆ 50 ಮಾಸ್ಟರ್ ಟ್ರೈನರ್ ಗಳನ್ನು ಗುರುತಿಸಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

17 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

17 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

17 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

17 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago