ಮುಂಗಾರಿನಲ್ಲಿ ರೈತರ ಕೃಷಿ ಚಟುವಟಿಕೆಗಳು ಚುರುಕಾಗಿರುತ್ತದೆ. ರೈತರಿಗೆ ತೊಂದರೆಯಾಗದಂತೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಹಾಗೂ ಸಸ್ಯ ಸಂರಕ್ಷಣಾ ಔಷಧ ದೊರಕುವಂತೆ ವ್ಯವಸ್ಥೆಯಾಗಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…… ಮುಂದೆ ಓದಿ……
ಮಂಡ್ಯ ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೃಷಿ ಪರಿಕರಗಳ ಉಸ್ತುವಾರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿದ್ದು, ಸುಮಾರು 60 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಲಿದೆ ಎಂದರು. ಜುಲೈ ಹಾಗೂ ಆಗಸ್ಟ್‌ನಲ್ಲಿ ರೈತ ಸಂಪರ್ಕ ಕೇಂದ್ರ, ಪಿ.ಎ.ಸಿ.ಎಸ್ ಹಾಗೂ ರೈತ ಉತ್ಪನ್ನ ಸಂಸ್ಥೆಗಳು ಪ್ರತಿ ದಿನ ಬೆಳಗ್ಗೆ 8.30 ಗಂಟೆಗೆ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ದಿನ ಲಭ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ವಿವರವನ್ನು ಅನಾವರಣ ಮಾಡಬೇಕು. ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ದಾಸ್ತಾನು ಪಟ್ಟಿಯನ್ನು ಬಿಡುಗಡೆ ಮಾಡಬೇಕು ಎಂದು ನಿರ್ದೇಶಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

