ಜಲ ಸಂರಕ್ಷಿತ ಗ್ರಾಮಗಳನ್ನು ರೂಪಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರ ಸಲಹೆ ಪಡೆದು, ನೀಲನಕ್ಷೆ ತಯಾರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.
2025-26 ರ ಆಯವ್ಯಯದಲ್ಲಿ ನೀರು ಸರಬರಾಜು ಮೂಲಸೌಕರ್ಯಗಳ ಸುಸ್ಥಿರ ಮತ್ತು ವೈಜ್ಞಾನಿಕ ಮಾಹಿತಿ ವ್ಯವಸ್ಥೆ ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಯಲ್ಲಿ ಸುಧಾರಣೆಗಳಾಗಬೇಕೆಂದು ಮನದಟ್ಟು ಮಾಡಿದರು. ಇಸ್ರೋ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಪಗ್ರಹ ಆಧಾರಿತ ಅಂತರ್ಜಲ ಶೋಧನೆ ಮಾಡಿದ್ದು, ಈ ಮಾಹಿತಿಯ ಲಾಭವನ್ನು ಪಡೆಯಲು ನಿರ್ದೇಶಿಸಿದ ಸಚಿವರು, ನಗರಾಭಿವೃದ್ಧಿ ಹಾಗೂ ಇನ್ನಿತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ಮತ್ತು ಸರ್ಕಾರೇತರ ಸೇವಾ ಸಂಸ್ಥೆಗಳು ಹಾಗೂ ಇತರ ವಿಷಯ ತಜ್ಞರ ಸಲಹೆಗಳನ್ನು ಪಡೆದು, ಜಲ ಸಂರಕ್ಷಿತ ಗ್ರಾಮಗಳನ್ನು ರೂಪಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.