ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

May 16, 2025
9:43 PM

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿವೆ. ಸಾರ್ವಜನಿಕರ ಸಹಕಾರದಿಂದ ಮಾತ್ರ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮನೆ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದರು. ಡೆಂಗ್ಯೂ ಸ್ವಚ್ಛ ನೀರಿನಲ್ಲಿಯೇ ಹುಟ್ಟುವುದರಿಂದ ಸಾರ್ವಜನಿಕರು ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಾಗೃತಿ ಮೂಢಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಸಚಿವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror