ಬೆಳೆ ಹಾನಿಗೆ ಸೂಕ್ತ ವಿಮೆ | ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

January 2, 2025
6:20 AM
ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು  ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ರೈತರ ಹಿತದೃಷ್ಟಿಯಿಂದ ಕೇಂದ್ರ ಸಚಿವ ಸಂಪುಟ ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ.  ಬೆಳೆ ಹಾನಿಗೆ ಸೂಕ್ತ ವಿಮೆ ನೀಡಲಾಗುತ್ತಿದೆ.  ಕಟಾವಿನ ನಂತರ ಬೆಳೆ ಹಾನಿಯಾದರೂ ಸಹ ವಿಮೆಯನ್ನು ನೀಡಲಾಗುವುದು.  ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು  ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಕಳೆದ ವರ್ಷ ನಾಲ್ಕು ಕೋಟಿ ರೈತರು ಫಸಲ್ ಬಿಮಾ ಯೋಜನೆಯ ಸೌಲಭ್ಯ ಪಡೆದಿದ್ದಾರೆ.  ಬೆಳೆ ಹಾನಿ ಅಂದಾಜಿಸಲು ದೂರಸಂವೇದಿ ಮಾಪನ ಬಳಸಿಕೊಳ್ಳಲಾಗುತ್ತಿದೆ.  ಫಸಲ್ ಬಿಮಾ ಯೋಜನೆಯಡಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ 850 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಉತ್ತಮ ಪ್ರಗತಿಯಾಗಿದೆ.  ಅಕ್ಕಿ ರಫ್ತಿಗೆ ಕನಿಷ್ಠ ರಪ್ತು ದರ ರದ್ದುಪಡಿಸಲಾಗಿದ್ದು, ಅಕ್ಕಿ ರಫ್ತಿಗೆ ಅನುಮತಿಸಲಾಗಿದೆ. ಇಂಡೋನೇಷ್ಯಾಗೆ 10 ಲಕ್ಷ ಮೆಟ್ರಿಕ್ ಟನ್ ಬಾಸುಮತಿ ಅಕ್ಕಿ ರಫ್ತು ಮಾಡಲು ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror