ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ ಯೋಜನೆ ಇರುತ್ತದೆ. ಜಾನುವಾರುವಿನ ವಿಮೆಯ ವಂತಿಗೆ ಶೇ.85 ನ್ನು ಸಹಾಯಧನ ರೂಪದಲ್ಲಿ ಸರ್ಕಾರದಿಂದ ಭರಿಸಲಾಗುತ್ತದೆ. ಜಾನುವಾರುಗಳ ಅನಿರೀಕ್ಷಿತ ಸಾವಿನಿಂದ ಎದುರಾಗುವ ಆರ್ಥಿಕ ಸಂಕಷ್ಟವನ್ನು ಎದುರಿಸಲು ಎಲ್ಲಾ ರೈತಬಾಂಧವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶುವೈದ್ಯರನ್ನು ಸಂಪರ್ಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel