Advertisement
MIRROR FOCUS

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ

Share

ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ (Integrated Digital Crop Survey) ಜಾರಿಗೆ ಮುಂದಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಹಾಗೂ ಐಟಿ-ಬಿಟಿ ಇಲಾಖೆಗಳ ಸಹಯೋಗದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳ್ಳಲಿದೆ.

ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಭೌಗೋಳಿಕ ಪ್ರದೇಶಗಳನ್ನು ಪ್ರತಿನಿಧಿಸುವಂತೆ ಆಯ್ಕೆ ಮಾಡಲಾದ ಐದು ಹೋಬಳಿಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.

ಅತ್ಯಾಧುನಿಕ ತಂತ್ರಜ್ಞಾನ ಬಳಕೆಯ ಈ ಹೊಸ ಮಾದರಿಯಲ್ಲಿ, ಉನ್ನತ ರೆಸಲ್ಯೂಷನ್ ಉಪಗ್ರಹ ಚಿತ್ರಣ, ಡ್ರೋನ್ ಸಮೀಕ್ಷೆ , ಜಿಐಎಸ್ (GIS) ದತ್ತಾಂಶ, ಕೃತಕ ಬುದ್ಧಿಮತ್ತೆ (AI), ಮಷಿನ್ ಲರ್ನಿಂಗ್ (Machine Learning) ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಈಗಿರುವ ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ಸಂಯೋಜಿಸಿ ನಿಖರ ಮತ್ತು ಪಾರದರ್ಶಕ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸಲಾಗುತ್ತದೆ.

ರೈತರಿಗೆ ಏನು ಪ್ರಯೋಜನ? :

  • ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆಯಿಂದ, ಬೆಳೆ ಮಾಹಿತಿಯ ನಿಖರತೆ ಹೆಚ್ಚಲಿದೆ.
  • ಬೆಳೆ ನಷ್ಟದ ಮೌಲ್ಯಮಾಪನ ವೇಗವಾಗಿ ಸಾಧ್ಯವಾಗಲಿದೆ.
  • ಬೆಳೆ ವಿಮೆ, ಪರಿಹಾರ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನ ಹೆಚ್ಚು ಪಾರದರ್ಶಕವಾಗಲಿದೆ.
  • ಕೃಷಿ ಯೋಜನೆ ರೂಪಿಸಲು ವಿಶ್ವಾಸಾರ್ಹ ದತ್ತಾಂಶ ಲಭ್ಯವಾಗಲಿದೆ.
  • ರೈತರಿಗೆ ಸರ್ಕಾರದ ಸೇವೆಗಳು ತ್ವರಿತವಾಗಿ ತಲುಪುವ ಸಾಧ್ಯತೆ ಹೆಚ್ಚಲಿದೆ.

ಡಿಜಿಟಲ್ ಕೃಷಿಯತ್ತ ಮತ್ತೊಂದು ಹೆಜ್ಜೆ : ರಾಜ್ಯ ಸರ್ಕಾರದ ಈ ಯೋಜನೆಯು ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ಆಡಳಿತ, ನಿಖರ ಕೃಷಿ (Precision Agriculture) ಮತ್ತು ದತ್ತಾಂಶ ಆಧಾರಿತ ನಿರ್ಧಾರ ವ್ಯವಸ್ಥೆಗೆ ಬಲ ನೀಡುವ ಮಹತ್ವದ ಹೆಜ್ಜೆಯಾಗಿದೆ. ಪ್ರಾಯೋಗಿಕ ಹಂತದ ಯಶಸ್ಸಿನ ಬಳಿಕ ಈ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ನಿರೀಕ್ಷೆಯಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The Karnataka government has launched a pilot Integrated Digital Crop Survey using satellite imagery, drones, GIS, artificial intelligence, and machine learning. The project will initially be implemented in five selected hoblis to improve crop data accuracy and strengthen digital governance in agriculture.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

14 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

21 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

21 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

21 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

2 days ago