ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

March 10, 2026
11:25 PM
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ ಮಿಶ್ರ ತೋಟಗಾರಿಕಾ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವರ್ಷಪೂರ ಆದಾಯ ಪಡೆಯುತ್ತಿದ್ದಾರೆ. ವಿವಿಧ ಬೆಳೆಗಳ ಜೊತೆ ಮೀನುಗಾರಿಕೆ ಮತ್ತು ಹೈನುಗಾರಿಕೆ ಸೇರಿಸಿ ಸಮಗ್ರ ಕೃಷಿ ಮಾದರಿಯನ್ನು ನಿರ್ಮಿಸಿ ಇತರ ರೈತರಿಗೆ ಪ್ರೇರಣೆಯಾಗಿದ್ದಾರೆ.

ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ರೂಪಿಸಬಹುದು ಎಂಬುದನ್ನು ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ಸಾಬೀತುಪಡಿಸಿದ್ದಾರೆ. ರಾಷ್ಟ್ರೀಯ ತೋಟಗಾರಿಕಾ ಮಿಷನ್, ಪ್ರಧಾನಮಂತ್ರಿ ಕೃಷಿ ಸಿಂಚಾಯ್ ಯೋಜನೆ ಹಾಗೂ ಆತ್ಮ ಯೋಜನೆಗಳ ನೆರವು ಪಡೆದು ತಮ್ಮ ಜಮೀನಿನಲ್ಲಿ ಮಿಶ್ರ ತೋಟಗಾರಿಕಾ ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಆದಾಯ ಗಳಿಸುತ್ತಿದ್ದಾರೆ.

ಕುರ್ತಕೋಟಿ ಗ್ರಾಮದ ರೈತರು ಅರುಣ ಹಾಳಕೇರಿ ಹಾಗೂ ಅಶೋಕ ಹಾಳಕೇರಿ ತಮ್ಮ 10 ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಿ ವಿವಿಧ ತೋಟಗಾರಿಕಾ ಬೆಳೆಗಳನ್ನು ಬೆಳೆದು ವರ್ಷಪೂರಾ ಆದಾಯ ಪಡೆಯುತ್ತಿದ್ದಾರೆ.

ತೋಟದಲ್ಲಿ ನೇರಳೆ, ತೆಂಗು, ಸಪೋಟ, ಹುಣಸೆ, ಮಾವು, ಕರಿಬೇವು, ಬಾಳೆ ಹಾಗೂ ಹೆಬ್ಬೇವು ಸೇರಿದಂತೆ ಹಲವಾರು ಬೆಳೆಗಳನ್ನು ಬೆಳೆದಿದ್ದಾರೆ. ಜೊತೆಗೆ ಮೀನು ಸಾಕಾಣೆ, ಹೈನುಗಾರಿಕೆ ಹಾಗೂ ಕುರಿ, ಕೋಳಿ ಸಾಕಾಣಿಕೆಯನ್ನೂ ಕೈಗೊಂಡು ಕೃಷಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದ್ದಾರೆ.

ತೋಟದಲ್ಲಿ ಸಾಲಿನಿಂದ ಸಾಲಿಗೆ 30 ಅಡಿ ಹಾಗೂ ಗಿಡದಿಂದ ಗಿಡಕ್ಕೆ 30 ಅಡಿ ಅಂತರ ಇಟ್ಟು ತೆಂಗಿನ ಮರಗಳನ್ನು ನೆಟ್ಟಿದ್ದಾರೆ. ತೆಂಗಿನ ಮರಗಳ ನಡುವೆ ನೇರಳೆ ಹಾಗೂ ಸಪೋಟ ಬೆಳೆಸಲಾಗಿದ್ದು, ಮಧ್ಯದಲ್ಲಿರುವ ಖಾಲಿ ಜಾಗದಲ್ಲಿ ಶೇಂಗಾ ಬೆಳೆದು ಹೆಚ್ಚುವರಿ ಆದಾಯ ಪಡೆಯುತ್ತಿದ್ದಾರೆ.

ರೈತರು ಸಾವಯವ ಕೃಷಿಗೂ ಆದ್ಯತೆ ನೀಡಿದ್ದು, ತೋಟಗಾರಿಕಾ ಬೆಳೆಗೆ ಕೊಟ್ಟಿಗೆ ಗೊಬ್ಬರ ಬಳಸಿ ಉತ್ತಮ ಇಳುವರಿ ಪಡೆಯುತ್ತಿದ್ದಾರೆ. ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ ನೀರಾವರಿ ವ್ಯವಸ್ಥೆ ಮಾಡಿದ್ದು, ತಮ್ಮದೇ ಜಮೀನಿನಲ್ಲಿ ಸಣ್ಣ ಕೆರೆ ನಿರ್ಮಿಸಿ ಹನಿ ನೀರಾವರಿ ವ್ಯವಸ್ಥೆ ಹಾಗೂ ಮೀನುಗಾರಿಕೆ ನಡೆಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತ ಅಶೋಕ ಹಾಳಕೇರಿ ಮಾತನಾಡುತ್ತಾ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದು ತೋಟಗಾರಿಕಾ ಇಲಾಖೆಯ ಮಾರ್ಗದರ್ಶನದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ. ಇದರಿಂದ ವರ್ಷಪೂರ ಆದಾಯ ಸಿಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ವಿವರಿಸಿದ ರೈತ ಅರುಣ ಹೊಸಮನಿ, ಅರುಣ ಹಾಗೂ ಅಶೋಕ ಹಾಳಕೇರಿ ತಮ್ಮ ಜಮೀನಿನಲ್ಲಿ ಮಿಶ್ರ ತೋಟಗಾರಿಕಾ ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಆದಾಯ ಪಡೆಯುತ್ತಿದ್ದಾರೆ. ಇದು ಸುತ್ತಮುತ್ತಲಿನ ರೈತರಿಗೆ ಮಾದರಿಯಾಗಿದೆ ಎಂದು ಹೇಳಿದರು.

ಗದಗ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ, ರೈತ ಸಹೋದರರು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಸೇರಿದಂತೆ ವಿವಿಧ ಯೋಜನೆಗಳ ಸಹಾಯಧನ ಹಾಗೂ ಮಾರ್ಗದರ್ಶನ ಪಡೆದು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಆದಾಯ ಗಳಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಭಾವಗೆ ಮಾತನಾಡಿ, ಕುರ್ತಕೋಟಿಯ ರೈತರು ನೇರಳೆ, ಸಪೋಟ, ನಿಂಬೆ, ತೆಂಗು, ಬಾಳೆ ಸೇರಿದಂತೆ ವಿವಿಧ ಬೆಳೆಗಳ ಜೊತೆಗೆ ಹೈನುಗಾರಿಕೆ ಹಾಗೂ ಮೀನುಗಾರಿಕೆಯನ್ನು ಸಂಯೋಜಿಸಿ ಉತ್ತಮ ಲಾಭ ಗಳಿಸುತ್ತಿದ್ದಾರೆ. ಇದು ಜಿಲ್ಲೆಯ ರೈತರಿಗೆ ಮಾದರಿಯಾಗಿದೆ ಎಂದು ಹೇಳಿದರು.

ಒಟ್ಟಾರೆಯಾಗಿ ಕೃಷಿಯಲ್ಲೂ ಉತ್ತಮ ಲಾಭ ಗಳಿಸಬಹುದು ಎಂಬುದನ್ನು ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ ಸಾಧನೆಯ ಮೂಲಕ ತೋರಿಸಿದ್ದು, ಇತರ ರೈತರಿಗೆ ಪ್ರೇರಣೆಯಾಗಿದ್ದಾರೆ.

Two farmer brothers from Kurtakoti village in Gadag district have demonstrated that integrated horticulture farming can generate year-round income. By cultivating multiple crops such as coconut, sapota, mango and banana along with dairy and fish farming under government schemes, they have turned their 10-acre farm into a profitable model for other farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror