ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಕಾಫಿ ಬೆಳೆಗಾರರು ತಮ್ಮ ಸಂಕಷ್ಟವನ್ನು ಮುಂದಿಟ್ಟರು. ಕಾಫಿ ಬೆಳೆಗಾರರು ಬ್ಯಾಂಕಿನಿಂದ ಪಡೆದ ಸಾಲ ವಸೂಲಾತಿ ಕುರಿತು ಇನ್ನಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.ಕಾಫಿ ಬೆಳೆಗಾರರಿಗೆ ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಸರಿಯಲ್ಲ ಎಂದು ರೈತರ ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾಂಕುಗಳು ಕಾಫಿ ಬೆಳೆಗಾರರ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಸಿ ಟಿ ರವಿ ಕಾಫಿ ಬೆಳೆಗಾರರ ಮೇಲೆ ಇರುವ ಸಾಲ ವಸೂಲಾತಿಯ ಒತ್ತಡವನ್ನು ಹಿಂಪಡೆಯಲು ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…