ಕೇಂದ್ರ ಸರ್ಕಾರದಿಂದ ಇಂದು ಮಧ್ಯಂತರ ಬಜೆಟ್ ಮಂಡನೆ | ಕಳೆದ 10 ವರ್ಷಗಳಲ್ಲಿ ದೇಶದ 25 ಕೋಟಿ ಜನರು ಬಡತನದಿಂದ ಹೊರಕ್ಕೆ | ನಿರ್ಮಲಾ ಸೀತಾರಾಮನ್

February 1, 2024
11:52 AM
ಕೇಂದ್ರ ಸರ್ಕಾರ ಇಂದು ಮಧ್ಯಂತರ ಬಜೆಟ್ ಮಂಡಿಸುತ್ತಿದೆ.

ಇದು ಚುನಾವಣಾ ವರ್ಷವಾದ (Election Year) ಕಾರಣ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಅವಕಾಶ ಇರುವುದಿಲ್ಲ. ಕೇವಲ ಲೇಖಾನುದಾನ ಮಾತ್ರ ಮಂಡಿಸಲಾಗುತ್ತದೆ. ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ. ಕೇಂದ್ರ ಸರ್ಕಾರ ಇಂದು ಮಧ್ಯಂತರ ಬಜೆಟ್ (Interim Budget) ಮಂಡಿಸುತ್ತಿದೆ.  ಕಳೆದ 10 ವರ್ಷಗಳಲ್ಲಿ ದೇಶದ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ.

Advertisement
Advertisement
Advertisement

ಇಂದು ಸಂಸತ್‌ನಲ್ಲಿ ತಮ್ಮ ಮಧ್ಯಂತರ ಬಜೆಟ್‌ನ ಭಾಷಣದಲ್ಲಿ ಈ ಮಾಹಿತಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ ದೇಶದ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದು, ಸರ್ಕಾರ ಬಡವರನ್ನು ಸಬಲೀಕರಣಗೊಳಿಸುತ್ತಿದೆ. ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಕೇಂದ್ರೀಕರಿಸಬೇಕಾಗಿದೆ, ಅವರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಪ್ರಮುಖ ಆದ್ಯತೆಗಳಾಗಿವೆ ಎಂದು ಹೇಳಿದರು.

Advertisement

4 ಕೋಟಿ ರೈತರು ಬೆಳೆ ವಿಮೆಯ ಲಾಭ ಪಡೆದಿದ್ದಾರೆ. ಉಚಿತ ಪಡಿತರದಿಂದಾಗಿ 80 ಕೋಟಿ ಜನರ ಆಹಾರದ ಚಿಂತೆ ದೂರಾವಗಿದೆ ಎಂದ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ, ಮಹಿಳಾ ಉದ್ಯಮಿಗಳಿಗೆ 30 ಕೋಟಿ ಮುದ್ರಾ ಯೋಜನೆ ಸಾಲಗಳನ್ನು ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ 70% ಮನೆಗಳನ್ನು ನೀಡಲಾಗಿದೆ. ನಮ್ಮ ಸರ್ಕಾರವು ಜವಾಬ್ದಾರಿಯುತ, ಜನಕೇಂದ್ರಿತ ಮತ್ತು ವಿಶ್ವಾಸ ಆಧಾರಿತ ಆಡಳಿತವನ್ನು ನಾಗರಿಕರ ಮೊದಲ ಆದ್ಯತೆಯನ್ನಾಗಿ ನೀಡಿದೆ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಅಭೂತಪೂರ್ವ ಬದಲಾವಣೆಯಾಗಿದೆ ಎಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 2014ರಲ್ಲಿ ದೇಶ ದೊಡ್ಡ ಸವಾಲುಗಳನ್ನು ಎದುರಿಸುತ್ತಿತ್ತು. ಸರ್ಕಾರವು ಆ ಸವಾಲುಗಳನ್ನು ಮೆಟ್ಟಿ ನಿಂತು ರಚನಾತ್ಮಕ ಸುಧಾರಣೆಗಳು ಮತ್ತು ಜನಸ್ನೇಹಿ ಸುಧಾರಣೆಗಳನ್ನು ಕೈಗೊಂಡಿತು. ದೇಶದ ಜನತೆ ಭವಿಷ್ಯದತ್ತ ನೋಡುತ್ತಿದ್ದಾರೆ. ಅವರು ಆಶಾವಾದಿಗಳಾಗಿದ್ದಾರೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ಮುನ್ನಡೆಯುತ್ತಿದ್ದೇವೆ ಎಂದರು.

2014ರಲ್ಲಿ ಪ್ರಧಾನಿ ಮೋದಿ ಕೆಲಸ ಆರಂಭಿಸಿದಾಗ ಸಾಕಷ್ಟು ಸವಾಲುಗಳಿದ್ದವು ಎಂದ ನಿರ್ಮಲಾ, ಸಾರ್ವಜನಿಕ ಹಿತದೃಷ್ಟಿಯಿಂದ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರಿಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ನೀಡಲಾಗಿದೆ. ದೇಶದಲ್ಲಿ ಹೊಸ ಉದ್ದೇಶ ಮತ್ತು ಭರವಸೆ ಹುಟ್ಟಿಕೊಂಡಿದೆ. ಸಾರ್ವಜನಿಕರು ನಮ್ಮನ್ನು ಎರಡನೇ ಬಾರಿಗೆ ಆಡಳಿತ ನಡೆಸಲು ಆಯ್ಕೆ ಮಾಡಿದ್ದಾರೆ. ಸಮಗ್ರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದೇವೆ. ‘ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್‌’ ಮಂತ್ರದ ಮೂಲಕ ಎಲ್ಲರ ಬೆಂಬಲ, ಎಲ್ಲರ ವಿಶ್ವಾಸ ಮತ್ತು ಎಲ್ಲರ ಪ್ರಯತ್ನ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿದ್ದೇವೆ ಎಂದರು.

Advertisement

ನಮ್ಮ ಸರ್ಕಾರ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ದಾಖಲೆ ಸಮಯದಲ್ಲಿ ಪೂರ್ಣಗೊಳಿಸಿದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 2047ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. ದೇಶದ 80 ಕೋಟಿ ಜನರಿಗೆ ಆಹಾರ ಒದಗಿಸಲಾಗಿದೆ. ನಮ್ಮ ಸರ್ಕಾರ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಿದೆ. ನಮ್ಮ ಸರ್ಕಾರದ ಅಡಿಯಲ್ಲಿ ದೇಶದಲ್ಲಿ ಉದ್ಯೋಗಾವಕಾಶಗಳು ಹೆಚ್ಚಿವೆ. ರೈತರ ಆರ್ಥಿಕ ಆದಾಯ ಹೆಚ್ಚಾಗಿದೆ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ಸಕಾರಾತ್ಮಕ ಬದಲಾವಣೆಗಳಾಗಿವೆ ಎಂದ ನಿರ್ಮಲಾ ಸೀತಾರಾಮನ್, ಕೊರೊನಾ ನಂತರ ದೇಶದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ಜನರಿಗೆ ಹೊಸ ಉದ್ಯೋಗಾವಕಾಶಗಳು ಸಿಕ್ಕಿವೆ ಮತ್ತು ನಮ್ಮ ಸರ್ಕಾರ ಯುವ ದೇಶದ ಆಕಾಂಕ್ಷೆಗಳನ್ನು ಈಡೇರಿಸಿದೆ ಮತ್ತು ನಮ್ಮ ಸರ್ಕಾರವು ಹಳ್ಳಿಗಳ ಜನರ ಅಭಿವೃದ್ಧಿಗೆ ಒತ್ತು ನೀಡಿದೆ.  ಮೋದಿ ಸರ್ಕಾರದ ಅಡಿಯಲ್ಲಿ ಉದ್ಯೋಗ ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವಕಾಶಗಳನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು.

Advertisement

ಇನ್ನು, ಸರ್ಕಾರವು ‘ಸರ್ಕಾರ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆ’ ವಿಷಯದಲ್ಲಿ ಜಿಡಿಪಿಗೆ ಹೊಸ ಅರ್ಥವನ್ನು ನೀಡಿದೆ ಎಂದ ವಿತ್ತ ಸಚಿವೆ, ಆಂತರಿಕ ಬೆಳವಣಿಗೆಗೆ ಸರ್ಕಾರ ವಿಶೇಷ ಗಮನ ನೀಡಿದೆ. ದೇಶದಲ್ಲಿ 15 ಏಮ್ಸ್‌ಗಳನ್ನು ನಿರ್ಮಿಸಲಾಗಿದೆ. ಕೋಟಿಗಟ್ಟಲೆ ಯುವಕರು ಕೌಶಲ್ಯ ಭಾರತದೊಂದಿಗೆ ಸಂಬಂಧ ಹೊಂದಿದ್ದಾರೆ. ಮುಂದಿನ ಐದು ವರ್ಷ ದೇಶಕ್ಕೆ ಮಹತ್ತರವಾಗಲಿದೆ ಎಂದರು.

– ಅಂತರ್ಜಾಲ ಮಾಹಿತಿ

Advertisement

Since this is an election year, there is no opportunity to present the full budget. Only accounting is presented. After the elections are over and the new government is in place, the full budget will be presented. The Central Government is presenting the Interim Budget today. Finance Minister Nirmala Sitharaman said that 25 crore people of the country have come out of poverty in the last 10 years.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror