ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು

February 10, 2026
6:38 AM
ಫೆಬ್ರವರಿ 12 ರಿಂದ 14 ರವರೆಗೆ ಬೆಂಗಳೂರಿನ ಜಯಮಹಲ್ ಪ್ಯಾಲೆಸ್‌ನಲ್ಲಿ ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026 ನಡೆಯಲಿದೆ. ಕಾಫಿ ಬೆಳೆಗಾರರು, ಉದ್ಯಮಿಗಳು ಮತ್ತು ಗ್ರಾಹಕರನ್ನು ಒಂದೇ ವೇದಿಕೆಗೆ ತರುವ ಉತ್ಸವಕ್ಕೆ ಜಾಗತಿಕ ಗಮನ ಸೆಳೆದಿದೆ.

ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026  ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ನಗರದ ಜಯಮಹಲ್ ಪ್ಯಾಲೆಸ್‌ ಚಾಮರವಜ್ರ ಸಭಾಂಗಣದಲ್ಲಿ ಈ ಮಹತ್ವದ ಉತ್ಸವ ನಡೆಯಲಿದೆ.

ಈ ಕುರಿತು Specialty Coffee Association of India ಅಧ್ಯಕ್ಷೆ Hamsini Appadurai ಮತ್ತು Coffee Board of Indiaಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ  ಕೂರ್ಮ ರಾವ್‌ ಮಾಹಿತಿ ನೀಡಿದರು.

ಕಾಫಿ ಅಸೋಸಿಯೇಶನ್‌ ಅಧ್ಯಕ್ಷೆ ಹಂಸಿಣಿ ಅಪ್ಪದುರೈ ಮಾತನಾಡಿ, ಫೆಬ್ರವರಿ 12ರಿಂದ 14ರವರೆಗೆ ನಡೆಯಲಿರುವ ಈ ಅಂತರಾಷ್ಟ್ರೀಯ ಕಾಫಿ ಉತ್ಸವಕ್ಕೆ ದೇಶ-ವಿದೇಶಗಳ ಕಾಫಿ ಪ್ರೇಮಿಗಳು, ಬೆಳೆಗಾರರು, ರೋಸ್ಟರ್‌ಗಳು ಹಾಗೂ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಎಲ್ಲರೂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಬೇಕೆಂದು ಅವರು ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೂರ್ಮಾ ರಾವ್ ಅವರು 2025 ಅನ್ನು ‘ಅಂತರಾಷ್ಟ್ರೀಯ ಸಹಕಾರಿ ವರ್ಷ’ ಎಂದು ಘೋಷಿಸಿರುವ ಹಿನ್ನೆಲೆ, ಕಾಫಿ ಬೆಳೆಗಾರರು, ಉದ್ಯಮಿಗಳು ಹಾಗೂ ಗ್ರಾಹಕರನ್ನು ಒಂದೇ ವೇದಿಕೆಗೆ ತರಲು ಈ ಬಾರಿಯ ಉತ್ಸವ ವಿಶೇಷ ಮಹತ್ವ ಪಡೆದುಕೊಂಡಿದೆ ಎಂದರು. ಕಾಫಿ ಮೌಲ್ಯ ಸರಪಳಿಯ ಎಲ್ಲ ಹಂತದ ಭಾಗಿದಾರರನ್ನು ಸಂಪರ್ಕಿಸುವ ವೇದಿಕೆಯಾಗಲಿದೆ ಎಂದು ವಿವರಿಸಿದರು.

ಬೆಂಗಳೂರು ಈಗಾಗಲೇ ಭಾರತದ ಪ್ರಮುಖ ಕಾಫಿ ಕೇಂದ್ರವಾಗಿದ್ದು, ಈ ಉತ್ಸವದ ಮೂಲಕ ಜಾಗತಿಕ ಕಾಫಿ ಭೂಪಟದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನೂ ಓದಿ…

ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror