ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ ನೀಡುವ ಸಂವಹನ ಕೇಂದ್ರಗಳನ್ನು ಸ್ಥಾಪಿಸುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕಟಿಸಿದೆ. ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಾಟ್ಕರ್ ದೆಹಲಿಯಲ್ಲಿ, ಉತ್ತಮ ವೈವಾಹಿಕ ಜೀವನ ನಡೆಸಲು ಯುವಕರು ಹಾಗೂ ಯುವತಿಯರಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚನಾ ಕೇಂದ್ರಗಳನ್ನು ದೇಶದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು. ಮಹಿಳಾ ದಿನದ ಪ್ರಯುಕ್ತ , ಮೊದಲ ಹಂತದಲ್ಲಿ ದೇಶದ 9 ರಾಜ್ಯಗಳ 21 ಜಿಲ್ಲೆಗಳಲ್ಲಿ ಸಂವಹನ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel