ಇಂದು ಅಂತಾರಾಷ್ಟ್ರೀಯ ಯೋಜ ದಿನಾಚರಣೆ. ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Advertisement
ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ವೀಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿ ಆಗುತ್ತದೆ. ಯೋಗ ದಿನಾಚರಣೆಗೆ ಭಾರತ ಕರೆ ನೀಡಿತ್ತು. ಭಾರತ ಕರೆ ನೀಡಿದಂತೆ ವಿಶ್ವದ ಹಲವು ದೇಶಗಳಲ್ಲಿ ಯೋಗ ಮಾಡಲಾಗುತ್ತಿದೆ ಎಂದು ಹೇಳಿದರು. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ. 2014ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗ ದಿನಾಚರಣೆಯ ಪ್ರಸ್ತಾಪ ಬಂದಾಗ ಅದಕ್ಕೆ ದಾಖಲೆ ಸಂಖ್ಯೆಯ ದೇಶಗಳು ಬೆಂಬಲ ನೀಡಿದ್ದವು ಎಂದರು.
ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಆಹ್ವಾನ ಮೇರೆಗೆ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿರುವ ಮೋದಿ ಅವರಿಗೆ ರಾಜತಾಂತ್ರಿಕ ಅಧಿಕಾರಿಗಳಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಇಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 9ನೇ ಯೋಗ ದಿನಾಚರಣೆಯ ನೇತೃತ್ವವನ್ನು ಮೋದಿ ವಹಿಸಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:25 ರಿಂದ 6:30ರ ಅವಧಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 180ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ.
Advertisement
ಇದಾದ ಬಳಿಕ ಅವರು ರಾತ್ರಿ 8 ಗಂಟೆಗೆ ವಾಷಿಂಗ್ಟನ್ ಡಿಸಿಗೆ ಪ್ರಯಾಣ ಮಾಡಲಿದ್ದಾರೆ. ವಾಷಿಂಗ್ಟನ್ ಡಿಸಿ ತಲುಪಿದ ಬಳಿಕ ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಆಯೋಜಿಸಿರುವ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement