Advertisement
ಸುದ್ದಿಗಳು

#Yogaday | ಅಂತರಾಷ್ಟ್ರೀಯ ಯೋಗ ದಿನ | ಯೋಗ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

Share

ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್‌ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ . ಇಂದು 9ನೇ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 2015 ರ ಜೂನ್ 21ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಯೋಗ ಪ್ರಾಚೀನ ಕಲೆ. ಇದು 5000 ವರ್ಷಗಳ ಆಳವಾದ ಬೇರೂರಿರುವ ಇತಿಹಾಸವನ್ನು ಹೊಂದಿದೆ. ದೈಹಿಕ ಭಂಗಿಗಳೊಂದಿಗೆ (ಆಸನಗಳು) ಉಸಿರಾಟದ ವ್ಯಾಯಾಮಗಳ (ಪ್ರಾಣಾಯಾಮ) ಸಂಯೋಜನೆಯ ಮೂಲಕ ಮನಸ್ಸು ಮತ್ತು ದೇಹದ ಆಧ್ಯಾತ್ಮಿಕ, ಭಾವನಾತ್ಮಕ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಇದು ಸಮಗ್ರ ವಿಧಾನವಾಗಿದೆ. ಅಂತರರಾಷ್ಟ್ರೀಯ ಯೋಗ ದಿನವು ಯೋಗ ಮಾಡುವುದರಿಂದಾಗುವ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಯಾವ ರೀತಿ ಪ್ರಯೋಜನಗಳನ್ನು ಹೊಂದಿದೆ ಹಾಗೂ ಯೋಗವನ್ನು ವಿಶ್ವಾದ್ಯಂತ ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಭಾರತ ಮತ್ತು ಯೋಗದ ನಡುವಿನ ವಿಶಿಷ್ಟ ಸಂಪರ್ಕ: ಭಾರತ ಮತ್ತು ಯೋಗವು ಪ್ರಪಂಚದ ಇತರ ದೇಶಗಳಿಗಿಂತ ವಿಶೇಷವಾದ ಸಂಬಂಧವನ್ನು ಹೊಂದಿದೆ. ಆಧ್ಯಾತ್ಮಿಕ ಭಾರತಕ್ಕೆ ತೆರೆದುಕೊಳ್ಳಲು ಮತ್ತು ಆಳವಾದ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗವಾಗಿದೆ. ಯೋಗದ ಮೂಲಕ್ಕೆ ಯಾವುದೇ ಬಲವಾದ ಪುರಾವೆಗಳಿಲ್ಲ. ಆದಾಗ್ಯೂ, ಅನೇಕ ಪುರಾತತ್ವಶಾಸ್ತ್ರಜ್ಞರು ಬುದ್ಧನ ಕಾಲದಲ್ಲಿ ಯೋಗವು ಭಾರತದಲ್ಲಿ ಹುಟ್ಟಿಕೊಂಡಿರಬೇಕು ಎಂದು ಬಲವಾಗಿ ಪ್ರತಿಪಾದಿಸುತ್ತಾರೆ. ವಿಪರ್ಯಾಸವೆಂದರೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕಾಗಿ ಒಂದು ದಿನವನ್ನು ಮೀಸಲಿಡುವ ಕ್ರಮಗಳನ್ನು ಪ್ರಾರಂಭಿಸುವ ದೇಶ ಭಾರತವಾಗಿದೆ.

2014 ರ ಯುನೈಟೆಡ್ ನೇಷನ್ಸ್ ಅಸೆಂಬ್ಲಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಗೆ 177 ಸದಸ್ಯ ರಾಷ್ಟ್ರಗಳಿಂದ ಅನುಮೋದನೆ ಸಿಕ್ಕಿತ್ತು. ವಿಶ್ವ ರಾಷ್ಟ್ರಗಳಿಂದ ಅತ್ಯಧಿಕ ಬೆಂಬಲವನ್ನು ಪಡೆದಿರುವ ಪ್ರಸ್ತಾವನೆ ಇದಾಗಿದ್ದು, ನಂತರ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವೆಂದು ಆಚರಣೆಗೆ ತರಲಾಯಿತು.

2015 ರ ಜೂನ್ 21ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ವಿಶೇಷ ದಿನದಂದು ಪ್ರಧಾನಿ ಮೋದಿಯವರ ಉಪಸ್ಥಿತಿಯಲ್ಲಿ ಸುಮಾರು 36000 ಉನ್ನತ ವ್ಯಕ್ತಿಗಳೊಂದಿಗೆ 35 ನಿಮಿಷಗಳ ಕಾಲ 21 ಯೋಗ ಆಸನಗಳನ್ನು ಪ್ರದರ್ಶಿಸಿದರು. ಅಂದಿನಿಂದ ಇಂದಿನವರೆಗೂ ಅದನ್ನು ಅನುಸರಿಸಿಕೊಂಡು ಬರಲಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

8 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

16 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

24 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago