ಅಂತರಾಷ್ಟ್ರೀಯ ಯೋಗ ದಿನಾಚರಣೆ :`ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ : ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಪ್ರಧಾನಿ ಮೋದಿ ಯೋಗ.

June 21, 2024
10:55 AM

ಇಂದು (ಜೂ.21) ಅಂತರರಾಷ್ಟ್ರೀಯ ಯೋಗ ದಿನ(International Yoga Day). ಈ ಬಾರಿಯ ವಸ್ತು ವಿಷಯ ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society). ಇಡೀ ಜಗತ್ತಿಗೆ ಇಂದು ಯೋಗಾಸನ(Yogasana) ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಎಲ್ಲರ ಚಿತ್ತ ಯೋಗದ ಕಡೆ ನೆಟ್ಟಿದೆ. ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಯನ್ನು ದಾಟಿ ಯೋಗ ಪಸರಿಸಿದೆ. ಯೋಗಾಸನದ (Yoga) ಪ್ರಯೋಜನ, ಮಹತ್ವವನ್ನು ಜಗತ್ತು ಕೊಂಡಾಡುತ್ತಿದೆ. ಭಾರತವಷ್ಟೇ(India) ಅಲ್ಲ, ವಿಶ್ವದ(World) ಅನೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಹಬ್ಬದಂತೆ ಸಂಭ್ರಮಿಸಲಾಗುತ್ತಿದೆ. ದೈಹಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಯೋಗ ಎಂದು ಸಾರಿ ಹೇಳಲಾಗುತ್ತಿದೆ.

Advertisement

10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಮ್ಮು‌ ಮತ್ತು‌ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಮೋದಿ ಅವರು, ಶ್ರೀನಗರದ ದಾಲ್‌ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ಸರಿಸುಮಾರು 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕ್ಯಾಪ್ಚರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳಲ್ಲೂ ವರ್ಚುವಲ್ ವೇದಿಕೆಯನ್ನು ಕಲ್ಪಿಸಲಾಗಿತ್ತು. ವರ್ಚುವಲ್‌ನಲ್ಲೂ‌ ಪ್ರತಿ ಜಿಲ್ಲೆಯಿಂದು ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ
ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ
April 17, 2025
5:27 AM
by: ದ ರೂರಲ್ ಮಿರರ್.ಕಾಂ
ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ
April 16, 2025
9:41 PM
by: ಡಾ.ಚಂದ್ರಶೇಖರ ದಾಮ್ಲೆ
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ
April 16, 2025
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group