ಇಂದು (ಜೂ.21) ಅಂತರರಾಷ್ಟ್ರೀಯ ಯೋಗ ದಿನ(International Yoga Day). ಈ ಬಾರಿಯ ವಸ್ತು ವಿಷಯ ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society). ಇಡೀ ಜಗತ್ತಿಗೆ ಇಂದು ಯೋಗಾಸನ(Yogasana) ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಎಲ್ಲರ ಚಿತ್ತ ಯೋಗದ ಕಡೆ ನೆಟ್ಟಿದೆ. ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಯನ್ನು ದಾಟಿ ಯೋಗ ಪಸರಿಸಿದೆ. ಯೋಗಾಸನದ (Yoga) ಪ್ರಯೋಜನ, ಮಹತ್ವವನ್ನು ಜಗತ್ತು ಕೊಂಡಾಡುತ್ತಿದೆ. ಭಾರತವಷ್ಟೇ(India) ಅಲ್ಲ, ವಿಶ್ವದ(World) ಅನೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಹಬ್ಬದಂತೆ ಸಂಭ್ರಮಿಸಲಾಗುತ್ತಿದೆ. ದೈಹಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಯೋಗ ಎಂದು ಸಾರಿ ಹೇಳಲಾಗುತ್ತಿದೆ.
10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.
3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಮೋದಿ ಅವರು, ಶ್ರೀನಗರದ ದಾಲ್ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ಸರಿಸುಮಾರು 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕ್ಯಾಪ್ಚರ್ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳಲ್ಲೂ ವರ್ಚುವಲ್ ವೇದಿಕೆಯನ್ನು ಕಲ್ಪಿಸಲಾಗಿತ್ತು. ವರ್ಚುವಲ್‌ನಲ್ಲೂ ಪ್ರತಿ ಜಿಲ್ಲೆಯಿಂದು ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…