16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ ಹಂತದಲ್ಲಿದೆ. ಇನ್ನು ಉಳಿದಿರುವುದು ಕೇವಲ ಒಂದು ಪಂದ್ಯ ಮಾತ್ರ. ಶುಕ್ರವಾರ ನಡೆದ ಕ್ವಾಲಿಫೈಯರ್-2 (Qualifier 2) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಗುಜರಾತ್ ಟೈಟಾನ್ಸ್ ಫೈನಲ್ಗೆ ಪ್ರವೇಶ ಪಡೆದಿದೆ. ಈ ಮೂಲಕ ಮೇ 28 ಭಾನುವಾರದಂದು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (CSK vs GT) ಐಪಿಎಲ್ 2023 ಫೈನಲ್ನಲ್ಲಿ ಮುಖಾಮುಖಿ ಆಗಲಿದೆ. ಹಾಲಿ ಚಾಂಪಿಯನ್ ಮತ್ತು ಮಾಜಿ ಚಾಂಪಿಯನ್ನರ್ ಕಾದಾಟಕ್ಕೆ ಇಡೀ ವಿಶ್ವವೇ ಕಾದುಕುಳಿತಿದೆ.
ಈ ರೋಚಕ ಕಾದಾಟ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ 2023 ಸಮಾರೋಪ ಸಮಾರಂಭ ಏರ್ಪಡಿಸಲು ಮುಂದಾಗಿದೆ. ಇದನ್ನು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಿದೆ. ಇದರಲ್ಲಿ ಖ್ಯಾತ ರ್ಯಾಪರ್ಗಳು ಪ್ರದರ್ಶನ ನೀಡಲಿದ್ದಾರೆ. ರ್ಯಾಪರ್ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಪಂದ್ಯಕ್ಕೂ ಮುನ್ನ ಕಿಂಗ್ ಮತ್ತು ನ್ಯೂಕ್ಲಿಯಾ ಅಭಿಮಾನಿಗಳನ್ನು ರಂಜಿಸಿದರೆ, ಪಂದ್ಯದ ಮೊದಲ ಇನ್ನಿಂಗ್ಸ್ ನಂತರ, ಜೋನಿತಾ ಗಾಂಧಿ ಮತ್ತು ಡಿವೈನ್ ತಮ್ಮ ಪ್ರದರ್ಶನ ನೀಡಲಿದ್ದಾರೆ.
ಹಾಗಾದರೆ ಐಪಿಎಲ್ 2023 ಕ್ಲೋಸಿಂಗ್ ಸೆರಮನಿ ಯಾವಾಗ?, ಎಷ್ಟು ಗಂಟೆಗೆ?, ಯಾರೆಲ್ಲ ಸಾಕ್ಷಿಯಾಗಲಿದ್ದಾರೆ ಎಂಬುದನ್ನು ನೋಡೋಣ.
ಐಪಿಎಲ್ 2023 ರ ಸಮಾರೋಪ ಸಮಾರಂಭ ಎಲ್ಲಿ ನಡೆಯಲಿದೆ?
ಐಪಿಎಲ್ 2023 ಸಮಾರೋಪ ಸಮಾರಂಭ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಐಪಿಎಲ್ 2023 ರ ಸಮಾರೋಪ ಸಮಾರಂಭ ಯಾವಾಗ ನಡೆಯಲಿದೆ?
ಐಪಿಎಲ್ 2023 ರ ಸಮಾರೋಪ ಸಮಾರಂಭ ಭಾನುವಾರ (ಮೇ 28) ನಡೆಯಲಿದೆ. ಅದ್ಧೂರಿ ಕಾರ್ಯಕ್ರಮ ಸಂಜೆ ಸುಮಾರು 6 ಗಂಟೆಯಿಂದ ಶುರುವಾಗುವ ನಿರೀಕ್ಷೆಯಿದೆ.
ಐಪಿಎಲ್ 2023 ರ ಸಮಾರೋಪ ಸಮಾರಂಭದಲ್ಲಿ ಯಾರು ಭಾಗವಹಿಸಲಿದ್ದಾರೆ?
ರ್ಯಾಪರ್ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ರಂಜಿಸಲಿದ್ದಾರೆ.
ಐಪಿಎಲ್ 2023 ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಐಪಿಎಲ್ 2023 ರ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಲೈವ್ ಸ್ಟ್ರೀಮ್ ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…