ಇರಾನ್ ನಲ್ಲಿ ಆರ್ಥಿಕ ಕುಸಿತ, ತೀವ್ರ ಹಣದುಬ್ಬರ ಮತ್ತು ವ್ಯಾಪಕ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆಗಳ ಮೇಲೆ ನಡೆದ ದಮನಕಾರಿ ಕ್ರಮದಿಂದ ಮೃತಪಟ್ಟವರ ಸಂಖ್ಯೆ 5000 ಕ್ಕೆ ಏರಿಕೆಯಾಗಿದೆ. ದೇಶದ ಹಲವು ಭಾಗಗಳಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
ಡಿಸೆಂಬರ್ 28 ರಿಂದ ಆರಂಭವಾದ ಪ್ರತಿಭಟನೆಗಳು ದೇಶಾದ್ಯಂತ ವ್ಯಾಪಕ ಹಾನಿಗೆ ಕಾರಣವಾಗಿವೆ. ಪ್ರತಿಭಟನೆಗಳ ಹಿನ್ನಲೆಯಲ್ಲಿ 350 ಮಸೀದಿಗಳು, 400 ಆಸ್ಪತ್ರೆಗಳು ಹಾಗೂ ನೂರಾರು ತುರ್ತು ಸೇವಾ ವಾಹನಗಳು ಧ್ವಂಸಗೊಂಡಿವೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಅಸ್ಥಿರತೆ ಇರಾನಿನ ಸ್ಥಿತಿಗತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಈ ನಡುವೆ, ಇರಾನ್ ನಲ್ಲಿ ವಾಸವಾಗಿದ್ದ ಭಾರತೀಯ ಪ್ರಜೆಗಳ ಮೊದಲ ತಂಡ ರಾಷ್ಟ್ರ ರಾಜಧಾನಿ ದೆಹಲಿಗೆ ಸುರಕ್ಷಿತವಾಗಿ ಆಗಮಿಸಿದೆ. ಇರಾನ್ನಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ವಾಪಾಸ್ ಬರುವಂತೆ ನೀಡಿದ ಸೂಚನೆಯ ಮೇರೆಗೆ ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ.
ಇರಾನ್ ಹಾಗೂ ಸುತ್ತಮುತ್ತಲಿನ ದೇಶಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದೆ. ಇರಾನ್ನಲ್ಲಿರುವ ಭಾರತೀಯರು ಅಲ್ಲಿನ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಹಾಗೂ ಸಾಧ್ಯವಾದಷ್ಟು ಬೇಗ ದೇಶವನ್ನು ತೊರೆಯುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…