Advertisement
ಸುದ್ದಿಗಳು

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

Share

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿ, ಮಧ್ಯಾಹ್ನ ನಂತರ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಕಡಿಮೆಯಾದರೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 16 ಹಾಗೂ 17 ರಂದು ಚಳಿ ಕಡಿಮೆಯಾಗಿ ಮೋಡದ ವಾತಾವರಣ ಇರಲಿದ್ದು, ನಂತರ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಏರಿಕೆಯಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಚಳಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಡಿಸೆಂಬರ್ 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಒಣ ಹವೆ , ಚಳಿ ಹೆಚ್ಚಾಗಬಹುದು. ಇವತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸುತ್ತಮುತ್ತ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆಯೊಂದಿಗೆ ಸ್ವಲ್ಪ ಚಳಿ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಡಿಸೆಂಬರ್ 18ರಿಂದ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಚಳಿ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಡಿಸೆಂಬರ್ 17 ರ ತನಕ ಮೋಡದ ವಾತಾವರಣ ಇರಲಿದ್ದು, 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಅಧಿಕವಾಗುವ ಸೂಚನೆಗಳಿವೆ.

ಉತ್ತರ ಭಾರತದ ಅಸ್ವಾಭಾವಿಕ ತಿರುವಿಕೆಯ ವ್ಯಾಪ್ತಿ ಹೆಚ್ಚಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಬೀಸುತ್ತಿರುವುದರಿಂದ ಹಾಗೂ ಅರಬ್ಬಿ ಸಮುದ್ರದ ಕೇರಳ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಈ ಮೋಡದ ವಾತಾವರಣ ಉಂಟಾಗಿದೆ. ಈ ಉತ್ತರ ಭಾರತದ ಈ ಬೃಹತ್ ತಿರುಗುವಿಕೆಯು ಪಶ್ಚಿಮಕ್ಕಿಂತ ಚಲಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 18 ರಿಂದ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸಲು ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮತ್ತೆ ಚಳಿಯ ಪ್ರಮಾಣವೂ ಹೆಚ್ಚುಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

5 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

5 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

5 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

8 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago