#IsrealPalestineconflict | ಯುದ್ಧ ಮುಂದುವರೆಸುವ ಪ್ರತಿಜ್ಞೆ ಮಾಡಿದ ಇಸ್ರೇಲ್‌ ಪ್ರಧಾನಿ | ಹಮಾಸ್‍ ಮೇಲೆ ಬೃಹತ್ ದಾಳಿಗೆ ಮುಂದಾದ ಇಸ್ರೇಲ್ |

October 14, 2023
1:56 PM
ಇಸ್ರೇಲ್- ಪ್ಯಾಲೇಸ್ಟೈನ್ ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಇಸ್ರೇಲ್ ಸೇನೆಯು ಬೃಹತ್ ದಾಳಿಯ ಮುನ್ಸೂಚನೆಯೊಂದನ್ನು ನೀಡಿದೆ. ಗಾಝಾ ಗಡಿಯಲ್ಲಿ ನೆಲದ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸುತ್ತಿದ್ದು, ಮೂರು ಲಕ್ಷಕ್ಕೂ ಅಧಿಕ ಸೈನಿಕರ ನಿಯೋಜನೆ ಮಾಡಲಾಗಿದೆ.

ಇಸ್ರೇಲ್- ಪ್ಯಾಲೇಸ್ಟೈನ್  ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಇಸ್ರೇಲ್ ಸೇನೆಯು ಬೃಹತ್ ದಾಳಿಯ ಮುನ್ಸೂಚನೆಯೊಂದನ್ನು ನೀಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು #BenjaminNetanyahu ಅವರು, ಇಸ್ರೇಲ್ ಸೇನೆ ಸಿಂಹಗಳಂತೆ ಹೋರಾಡಲಿದೆ. ನಮ್ಮ ಶತ್ರುಗಳು ನಡೆಸಿದ ದೌರ್ಜನ್ಯವನ್ನು ನಾವು ಎಂದಿಗೂ ಮರೆಯುವುದಿಲ್ಲ. ನಾವು ಎಂದಿಗೂ ಹಮಾಸ್ ಕ್ಷಮಿಸುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Advertisement

ಅನೇಕ ದಶಕಗಳಲ್ಲಿ ಯಹೂದಿ ಜನರಿಗೆ ಮಾಡಿದ ಈ ದೌರ್ಜನ್ಯಗಳನ್ನು ಜಗತ್ತಿಗೆ ಅಥವಾ ಯಾರಿಗಾದರೂ ಮರೆಯಲು ನಾವು ಎಂದಿಗೂ ಬಿಡುವುದಿಲ್ಲ. ನಾವು ನಮ್ಮ ಶತ್ರುಗಳನ್ನು ಅಭೂತಪೂರ್ವ ಬಲದಿಂದ ಹೊಡೆಯುತ್ತಿದ್ದೇವೆ ಎಂದು ಹೇಳುವ ಮೂಲಕ ದಾಳಿಯ ಇಸ್ರೇಲ್ ಪ್ರಧಾನಿಯವರು ದಾಳಿಯ ಮುನ್ಸೂಚನೆ ನೀಡಿದ್ದಾರೆ.

ಕಳೆದ ಎಂಟು ದಿನಗಳಲ್ಲಿ ಹಮಾಸ್‍ನ #Hamas 1,300 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಪ್ಯಾಲೇಸ್ಟೈನ್‍ನ ಗಾಝಾ ಮತ್ತು ವೆಸ್ಟ್ ಬ್ಯಾಂಕ್‍ನಲ್ಲಿ 1,900 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಗಾಝಾ ಗಡಿಯಲ್ಲಿ ನೆಲದ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸುತ್ತಿದ್ದು, ಮೂರು ಲಕ್ಷಕ್ಕೂ ಅಧಿಕ ಸೈನಿಕರ ನಿಯೋಜನೆ ಮಾಡಲಾಗಿದೆ. ಇಸ್ರೇಲ್ ಸೇನೆಯು ಉತ್ತರ ಗಾಜಾದಲ್ಲಿದಾಳಿಗೆ ತಯಾರಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಗಾಝಾದಿಂದ ದಕ್ಷಿಣಕ್ಕೆ ತೆರಳಲು ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ
ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |
April 4, 2025
1:10 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group