ಇಸ್ರೇಲ್ ದೇಶವು 50,000 ಹೊಸ ಕೊರೋನಾ ವೈರಸ್ ಪ್ರಕರಣಗಳನ್ನು ನೋಡುವ ಸಾಧ್ಯತೆಯಿದೆ. ಆದುದರಿಂದ ಪೈಜರ್ ಅಭಿವೃದ್ಧಿಪಡಿಸಿದ ಲಸಿಕೆಯ ನಾಲ್ಕನೇ ಡೋಸ್ ಅನ್ನು ದೇಶದ ಆರೋಗ್ಯ ಸಚಿವಾಲಯವು 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಮತ್ತು ಕನಿಷ್ಠ ನಾಲ್ಕು ತಿಂಗಳ ಹಿಂದೆ ಮೂರನೇ ಡೋಸ್ ಪಡೆದ ವೈದ್ಯಕೀಯ ಸಿಬ್ಬಂದಿಗೆ ಅನುಮೋದಿಸಿದೆ ಎಂದು ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದರು.
ಇಸ್ರೇಲ್‌ನ 9.45 ಮಿಲಿಯನ್ ಜನಸಂಖ್ಯೆಯ ಸುಮಾರು 70 ಪ್ರತಿಶತದಷ್ಟು ಜನರು ಕನಿಷ್ಠ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಮತ್ತು ಸುಮಾರು 45 ಪ್ರತಿಶತ ಇಸ್ರೇಲಿಗಳು ಎಲ್ಲಾ ಮೂರು ಡೋಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ಆರೋಗ್ಯ ಸಚಿವಾಲಯವು ಭಾನುವಾರ ಮಾಹಿತಿಯನ್ನು ನೀಡಿದೆ.
ಗುರುವಾರದಂದು ಇಸ್ರೇಲ್ ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವ ಜನರಿಗೆ ಹಾಗೂ ಮನೆಗಳಲ್ಲಿ ವಾಸಿಸುವ ವಯಸ್ಸಾದವರಿಗೆ ನಾಲ್ಕನೇ ಲಸಿಕೆ ಶಾಟ್ ಅನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…