ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.
ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.
ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.
India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.
– ಅಂತರ್ಜಾಲ ಮಾಹಿತಿ
ಇಂದು ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಎಪ್ರಿಲ್ 9ರಿಂದ…
ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ…
ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಬಾರದು ಎಂದು…
ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ…
ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5…
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು…