Advertisement
MIRROR FOCUS

ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

Share

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

5 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

11 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

11 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

21 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago