ಭಾರತೀಯರ ಮಹತ್ವಾಕಾಂಶೆಯ ಯೋಜನೆ, ವಿಶ್ವದ ಕುತೂಹಲಕ್ಕೆ ಕಾರಣವಾಗಿದ್ದ ಚಂದ್ರಯಾನ – #Chandrayaan ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಚಂದ್ರಲೋಕವನ್ನು ಸೇರಿದ ಬಾಹಾಕಾಶ್ಯ ನೌಕೆ ಈಗ ಹೇಗಿದೆ..? ಎಲ್ಲಿಗೆವರೆಗೆ ತಲುಪಿದೆ.? ಯಾವ ಸ್ಟೇಟಸ್ನಲ್ಲಿದೆ ಅನ್ನೋದನ್ನು ಈಗ ಇಸ್ರೋ#ISRO ವಿಜ್ಞಾನಿಗಳು ತಿಳಿಸಿದ್ದಾರೆ. ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ ಹೇಳಿದೆ.
ಈ ಸಂಬಂಧ ಶನಿವಾರ ಟ್ವೀಟ್ ಮಾಡಿರುವ ಇಸ್ರೋ, ಶುಕ್ರವಾರ ಚಂದ್ರನೆಡೆ ತೆರಳಿರುವ ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ. ಬೆಂಗಳೂರಿನಲ್ಲಿರುವ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‍ವರ್ಕ್#ISTRACನಲ್ಲಿ ಚಂದ್ರಯಾನ-3 ಗಗನನೌಕೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಬಾಹ್ಯಾಕಾಶ ನೌಕೆಯು ಈಗ 41,762 ಕಿ.ಮೀ x 173 ಕಿ.ಮೀ ಕಕ್ಷೆಯಲ್ಲಿದೆ ಎಂದು ಮಾಹಿತಿ ನೀಡಿದೆ.
ಶುಕ್ರವಾರ ಆಂಧ್ರಪ್ರದೇಶದ #Andhrapradesh ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಶುಭಶುಕ್ರವಾರದಂದು ಜಿಎಸ್‍ಎಲ್‍ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಿಂದ ಉಪಗ್ರಹವು ಮಧ್ಯಾಹ್ನ 2.35ಕ್ಕೆ ನಭಕ್ಕೆ ಚಿಮ್ಮಿತ್ತು.
ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel