ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನ.7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದ್ದು, ನ. 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಿದೆ.
ದಕ್ಷಿಣ ಕನ್ನಡ ವಿಜ್ಞಾನ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಬಾಹ್ಯಾಕಾಶ ವಿಷಯಗಳಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದರಲ್ಲಿ ಚಂದ್ರಯಾನ-1, ಮಂಗಳಯಾನ, ರಾಕೆಟ್ ಉಡ್ಡಯನ ಕೇಂದ್ರ, ಸಂವಹನ ಉಪಗ್ರಹ, ಆರ್ಯಭಟ, ಭಾಸ್ಕರ ಮೊದಲಾದ ಈ ಹಿಂದಿನ ಉಪಗ್ರಹಗಳ ಮಾದರಿಗಳು, ಅದೇ ರೀತಿ ಮುಂದಿನ ಬಾಹ್ಯಾಕಾಶ ಯೋಜನೆ ಗಗನ್ ಯಾನ್ 2024ರ ಮಾದರಿಗಳು ಹಾಗೂ ಇನ್ನಿತರ ಬಾಹ್ಯಾಕಾಶ ಯೋಜನೆಗಳ ಮಾದರಿಗಳು ವೀಕ್ಷಣೆಗೆ ಲಭ್ಯವಿದ್ದು ತಾಲೂಕಿನ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…