ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಒಂದಾದ ಮೇಲೊಂದರಂತೆ ಸಾಧನೆಯನ್ನು ಮಾಡುತ್ತಲೇ ಇದೆ. ಚಂದ್ರಯಾನ-3 ಮತ್ತು ಆದಿತ್ಯ ಎಲ್1#Aditya L1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.
ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ. ಕ್ರೂ ಎಸ್ಕೇಪ್ ಸಿಸ್ಟಮ್ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್ ಪ್ರಶೆರ್ ಹಾಗೂ ಟ್ರಾನ್ಸಾನಿಕ್ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…