ಡಿಸೆಂಬರ್ ಮೊದಲ ವಾರದಲ್ಲಿ ಮಾನವರಹಿತ ಗಗನಯಾನ ಪರೀಕ್ಷಾರ್ಥ ಉಡಾವಣೆ – ಇಸ್ರೋ

October 23, 2025
8:37 PM

ಮಾನವರಹಿತ ಗಗನಯಾನ ಉಡಾವಣೆಯ ಕಾರ್ಯ ಶೇಕಡ 90 ರಷ್ಟು ಪೂರ್ಣಗೊಂಡಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಹಾರಾಟ ಮಿಷನ್ ಜಿ-1 ಡಿಸೆಂಬರ್ ಮೊದಲ ವಾರದಲ್ಲಿ ಉಡಾವಣೆಗೆ ಸಜ್ಜಾಗಿದೆ ಎಂದು ಹೇಳಿದ್ದಾರೆ.  ಎಸ್ಕೇಪ್ ಸಿಸ್ಟಮ್, ಪ್ಯಾರಾಚೂಟ್ ಮಾಡ್ಯೂಲ್, ಸಂವಹನ ವ್ಯವಸ್ಥೆಗಳು ಮತ್ತು ಇತರ ವ್ಯವಸ್ಥೆಗಳೊಂದಿಗೆ ಕ್ರ್ಯೂ ಮಾಡಲ್ ಪರೀಕ್ಷೆಗಳು ಯಶಸ್ವಿಯಾಗಿದ್ದು, ವ್ಯೋಮಮಿತ್ರ ಹ್ಯುಮನಾಯ್ಡ್ ಡಿಸೆಂಬರ್‌ನಲ್ಲಿ ಭೂಮಿಯ ಕೆಳಕಕ್ಷೆಗೆ ಹಾರಲಿದೆ ಎಂದು ತಿಳಿಸಿದ್ದಾರೆ.   ಇದೇ ವೇಳೆ ಮಾನವಸಹಿತ ಗಗನಯಾನದಲ್ಲಿ ಮೂವರು ಭಾರತೀಯ ಗಗನಯಾತ್ರಿಗಳು 2027ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror