ಮಾನವರಹಿತ ಗಗನಯಾನ ಉಡಾವಣೆಯ ಕಾರ್ಯ ಶೇಕಡ 90 ರಷ್ಟು ಪೂರ್ಣಗೊಂಡಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಹಾರಾಟ ಮಿಷನ್ ಜಿ-1 ಡಿಸೆಂಬರ್ ಮೊದಲ ವಾರದಲ್ಲಿ ಉಡಾವಣೆಗೆ ಸಜ್ಜಾಗಿದೆ ಎಂದು ಹೇಳಿದ್ದಾರೆ. ಎಸ್ಕೇಪ್ ಸಿಸ್ಟಮ್, ಪ್ಯಾರಾಚೂಟ್ ಮಾಡ್ಯೂಲ್, ಸಂವಹನ ವ್ಯವಸ್ಥೆಗಳು ಮತ್ತು ಇತರ ವ್ಯವಸ್ಥೆಗಳೊಂದಿಗೆ ಕ್ರ್ಯೂ ಮಾಡಲ್ ಪರೀಕ್ಷೆಗಳು ಯಶಸ್ವಿಯಾಗಿದ್ದು, ವ್ಯೋಮಮಿತ್ರ ಹ್ಯುಮನಾಯ್ಡ್ ಡಿಸೆಂಬರ್‌ನಲ್ಲಿ ಭೂಮಿಯ ಕೆಳಕಕ್ಷೆಗೆ ಹಾರಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಮಾನವಸಹಿತ ಗಗನಯಾನದಲ್ಲಿ ಮೂವರು ಭಾರತೀಯ ಗಗನಯಾತ್ರಿಗಳು 2027ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…