ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

April 29, 2024
5:50 PM

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಗ್ಗ ಜಗ್ಗಾಟ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ(Congress govt) ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಹಿನ್ನೆಲೆ ರಾಜ್ಯದ ಬರ ಪರಿಹಾರ (Drought Relief )ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ನೀಡಿದ ಅಂತರ್ ಸಚಿವಾಲಯದ ವರದಿಯನ್ನು (Inter Ministerial Central Team’s Report) ಸಲ್ಲಿಸುವಂತೆ ಸುಪ್ರೀಂಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಿತು.

Advertisement
Advertisement
ಇಂದಿನ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರದ (Karnataka Government) ಪರ ವಾದ ಮಂಡಿಸಿದ ಕಪಿಲ್ ಸಿಬಲ್ (Kapil Sibal), ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ ಅದಕ್ಕಾಗಿ ಧನ್ಯವಾದಗಳು. ಆದರೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಕಡಿಮೆಯಾಗಿದೆ ಇದು ಅಸಮಂಜಸ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಪರ ವಾದಿಸಿದ ಅರ್ಟಾನಿ ಜನರಲ್ ಆರ್ ವೆಂಕಟರಮಣಿ, ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. 

ಇದೇ ಅಂಶವನ್ನು ಪ್ರಸ್ತಾಪಿಸಿದ ಸಿಬಲ್, ರಾಜ್ಯಕ್ಕೆ ಆಗಮಿಸಿದ ತಜ್ಞರ ತಂಡದ ವರದಿ ಏನು ಎಂಬುದು ರಾಜ್ಯಕ್ಕೆ ತಿಳಿದಿಲ್ಲ, ಅದರ ಪ್ರತಿಯನ್ನು ರಾಜ್ಯಕ್ಕೆ ನೀಡಿಲ್ಲ. ಹೀಗಾಗಿ ಆ ಪ್ರತಿಯನ್ನು ಕೋರ್ಟ್ ಮುಂದೆ ಇಡಬೇಕು. ಅದರ ಅನ್ವಯ ಪರಿಹಾರ ನೀಡುವುದಕ್ಕೆ ನಮ್ಮದು ಯಾವುದೇ ತಕರಾರು ಇಲ್ಲ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಲು ಸಮಯ ಬೇಕು ಎಂದು ಅರ್ಟಾನಿ ಜನರಲ್ ಕೇಳಿದರು‌. ಇದಕ್ಕೆ ನಿರಾಕರಿಸಿದ ಪೀಠ ಮುಂದಿನ ಸೋಮವಾರದೊಳಗೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು.

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದ್ದು ಈ ಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಈಗ ಮತ್ತೆ ತಕರಾರು ಎತ್ತಿದೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group