ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಗ್ಗ ಜಗ್ಗಾಟ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ(Congress govt) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹಿನ್ನೆಲೆ ರಾಜ್ಯದ ಬರ ಪರಿಹಾರ (Drought Relief )ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ನೀಡಿದ ಅಂತರ್ ಸಚಿವಾಲಯದ ವರದಿಯನ್ನು (Inter Ministerial Central Team’s Report) ಸಲ್ಲಿಸುವಂತೆ ಸುಪ್ರೀಂಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಿತು.
ಇದೇ ಅಂಶವನ್ನು ಪ್ರಸ್ತಾಪಿಸಿದ ಸಿಬಲ್, ರಾಜ್ಯಕ್ಕೆ ಆಗಮಿಸಿದ ತಜ್ಞರ ತಂಡದ ವರದಿ ಏನು ಎಂಬುದು ರಾಜ್ಯಕ್ಕೆ ತಿಳಿದಿಲ್ಲ, ಅದರ ಪ್ರತಿಯನ್ನು ರಾಜ್ಯಕ್ಕೆ ನೀಡಿಲ್ಲ. ಹೀಗಾಗಿ ಆ ಪ್ರತಿಯನ್ನು ಕೋರ್ಟ್ ಮುಂದೆ ಇಡಬೇಕು. ಅದರ ಅನ್ವಯ ಪರಿಹಾರ ನೀಡುವುದಕ್ಕೆ ನಮ್ಮದು ಯಾವುದೇ ತಕರಾರು ಇಲ್ಲ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಲು ಸಮಯ ಬೇಕು ಎಂದು ಅರ್ಟಾನಿ ಜನರಲ್ ಕೇಳಿದರು. ಇದಕ್ಕೆ ನಿರಾಕರಿಸಿದ ಪೀಠ ಮುಂದಿನ ಸೋಮವಾರದೊಳಗೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು.
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದ್ದು ಈ ಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಈಗ ಮತ್ತೆ ತಕರಾರು ಎತ್ತಿದೆ.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…