ಹೆತ್ತವರು ತೀರಿಕೊಂಡ ಬಳಿಕ ಅನೇಕ ಕುಟುಂಬಗಳಲ್ಲಿ ಎಲ್ಲರೂ ಪರಕೀಯರಂತೆ ಆಗಿಬಿಡುವುದು ವಿಪರ್ಯಾಸ….!!!

November 4, 2023
8:54 AM
ಬದುಕನ್ನು ಹೇಗೆ ಸುಧಾರಿಸಿಕೊಳ್ಳಬೇಕು? ಇದನ್ನು ತಿಳಿದುಕೊಳ್ಳಬೇಕಾದ್ದೇ ಇಂದಿನ ಅವಶ್ಯಕತೆಗಳಲ್ಲಿ ಒಂದು...

ಹೆತ್ತ ತಂದೆತಾಯಿ(Parents) ಇರುವವರೆಗೆ ಮಾತ್ರ ಊರು ಒಡಹುಟ್ಟಿದವರು ಬಂಧು ಮಿತ್ರರು ಎಂಬ ಕೊಂಡಿ ಬೆಸೆದುಕೊಂಡಿರುತ್ತದೆ, ಅವರೇ ಕಾಲವಾದ ನಂತರ ಎಲ್ಲರೂ ಒಂದಲ್ಲ ಒಂದು ಕಾರಣದಿಂದ ದೂರಾಗುತ್ತಲೇ ಹೋಗುತ್ತಾರೆ. ಇದು ಎಲ್ಲಾ ರೀತಿಯ ಕುಟುಂಬಗಳಿಗೂ(Family) ಅನ್ವಯಿಸುವುದಂತೂ ನಿಜ. ನಾವು ಎಷ್ಟೇ ಕಷ್ಟಪಟ್ಟು ಹಿಡಿದಿಟ್ಟುಕೊಂಡ ಬಾಂಧವ್ಯದ ಕೊಂಡಿಗಳು ಕಾಲಕ್ರಮೇಣ ಸಡಿಲವಾಗಿ ಎಲ್ಲೋ ಒಂದು ಕಡೆ ಜಾರುವ ಸಂದರ್ಭಗಳು ಬರಬಹುದು.

Advertisement
Advertisement

ಕೆಲವರು ತುಂಬಾ ಸೂಕ್ಷ್ಮ ಮನಸ್ಥಿತಿಯನ್ನು ಹೊಂದಿರುತ್ತಾರೆ, ಅಂತಹವರಿಗೆ ಇಂತಹ ಪರಿಸ್ಥಿತಿಯನ್ನು ತಕ್ಷಣವೇ ಸುಧಾರಿಸಿಕೊಳ್ಳಲು ಕಷ್ಟವಾಗಬಹುದು. ಆದರೂ ಇದಂತೂ ಕಟುಸತ್ಯ, ಕಾಲಕ್ರಮೇಣ ಕುಟುಂಬ ಬೆಳೆದಂತೆ ಪ್ರತಿಯೊಬ್ಬರೂ ಅವರವರ ಸಂಸಾರಕ್ಕೆ ಪ್ರಾಮುಖ್ಯತೆ ಕೊಟ್ಟು ಹೆಂಡತಿ ಮಕ್ಕಳೆನ್ನುವ ಮಮಕಾರಕ್ಕೆ ಸಿಲುಕಿ ಅಸಹಾಯಕರಾಗಿ ಹಿಂದಿನಷ್ಟು ಕುಟುಂಬದೊಂದಿಗೆ ಬೆರೆಯಲು ಸಾಧ್ಯವಾಗುವುದಿಲ್ಲ. ಅದರಲ್ಲೂ ಹಾಗೋ ಹೀಗೋ ತಂದೆತಾಯಿ ಬದುಕಿರುವವರೆಗೆ ಅವರ ಮನಸ್ಸಂತೋಷಕ್ಕಾಗಿ ಯಾದರೂ ಅಗಾಗ್ಗೆ ಉಳಿದ ಅಣ್ಣತಮ್ಮಂದಿರೊಂದಿಗೆ ಹಾಗೂ ಅಕ್ಕತಂಗಿಯರೊಂದಿಗೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಒಮ್ಮೆ ಹಳೆಯ ಕೊಂಡಿ ಎನಿಸಿಕೊಂಡ ಹೆತ್ತವರು ತೀರಿಕೊಂಡ ಬಳಿಕ ಅನೇಕ ಕುಟುಂಬಗಳಲ್ಲಿ ಎಲ್ಲರೂ ಪರಕೀಯರಂತೆ ಆಗಿಬಿಡುವುದು ವಿಪರ್ಯಾಸ.

Advertisement

ಇತ್ತೀಚಿನ ದಿನಗಳಲ್ಲಿ ಇಂತಹ ಹಲವಾರು ನಿದರ್ಶನಗಳು ನೋಡಲು ಸಿಗುತ್ತದೆ. ಇಂತಹ ಒಂದು ಬೆಳವಣಿಗೆಗೆ ಮುಖ್ಯ ಕಾರಣ ನಮ್ಮ ಒಳಗಿರುವ ಸ್ವಾರ್ಥ ಹಾಗೂ ಅಹಂ ಕಾರಣವಷ್ಟೇ ಅಲ್ಲದೆ ಬೇರೇನೂ ಅಲ್ಲ. ಒಂದೇ ಕುಟುಂಬದವರಾದರೂ ಕೂಡ ಪ್ರತ್ಯೇಕ ಸಂಸಾರಹೂಡಿದ ಮೇಲೆ ತಮ್ಮ ಪ್ರತಿಷ್ಠೆ ಮೆರೆಯಲು ಇತರರನ್ನು ತುಚ್ಚವಾಗಿ ಕಾಣುವುದು ಹಾಗೂ ಎಲ್ಲಾ ವಿಷಯದಲ್ಲೂ ತಮಗೇ ಪ್ರಾಮುಖ್ಯತೆ ಸಿಗಬೇಕೆಂದು ಬಯಸುವುದು ಸರ್ವೇಸಾಮಾನ್ಯ ವಾಗಿಬಿಟ್ಟಿದೆ. ಇಂತಹ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ನಾವು ನಮ್ಮವರೊಂದಿಗೇ ಅಪರಿಚಿತರಾಗುತ್ತಿರುವ ಸಂಶಯ ಮನಸ್ಸಿನಲ್ಲಿ ಮೂಡುವುದು ನಿಜವಲ್ಲವೇ ಸ್ನೇಹಿತರೆ.

ಹೆತ್ತವರು ಬದುಕಿರುವವರೆಗೂ ಕುಟುಂಬದಲ್ಲಿ ಒಂದು ಭದ್ರತೆ ಇರುತ್ತದೆ, ಯಾವುದೇ ವಿಚಾರವಾದರೂ ಸಮಯೋಚಿತವಾಗಿ ಯೋಚಿಸಿ ಬುದ್ದಿಹೇಳುವ ಜವಾಬ್ದಾರಿ ಹೊಂದಿರುತ್ತಾರೆ. ಪ್ರತಿಯೊಬ್ಬ ಮಕ್ಕಳನ್ನು ಆಗಾಗ ನೋಡಬೇಕೆಂಬ ಹಂಬಲದಿಂದ ಎಷ್ಟೇ ದೂರವಿದ್ದರೂ ತಮ್ಮಲ್ಲಿಗೆ ಕರೆಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಹಬ್ಬಹರಿದಿನಗಳೆಂದರೆ ಎಲ್ಲರೂ ಜೊತೆಯಾಗಿಯೇ ಆಚರಿಸಿಕೊಳ್ಳಬೇಕೆನ್ನುವ ಅಪೇಕ್ಷೆಯಂತೆ ಸಾಧ್ಯವಾದಷ್ಟು ಕುಟುಂಬದ ಐಕ್ಯತೆಯನ್ನು ಹಿಡಿದಿಟ್ಟುಕೊಂಡಿರುತ್ತಾರೆ. ಇದನ್ನು ಎಲ್ಲರೂ ತಮ್ಮ ಕಾಲಾನಂತರವೂ ನಡೆಸಿಕೊಂಡು ಹೋಗಬೇಕೆನ್ನುವ ಅಪೇಕ್ಷೆಯನ್ನು ಹೊಂದಿರುತ್ತಾರೆ.

Advertisement

ಅದರೆ ಇಂದಿನ ಜೀವನ ಶೈಲಿ ಈ ತಲೆಮಾರಿನ ತೋರಿಕೆಯ ಪ್ರೀತಿ ವಿಶ್ವಾಸ ಇಂತಹ ಒಂದು ಬಾಂಧವ್ಯದ ಕೊಂಡಿಬೆಸೆಯುವಲ್ಲಿ ವಿಫಲವಾಗಿದೆ ಎನ್ನಬಹುದು. ಬಹಳಷ್ಟು ಕುಟುಂಬಗಳು ಹಂಚಿಹರಡಿ ಪ್ರತ್ಯೇಕ ಸಂಸಾರಗಳಾಗಿ ಅಷ್ಟಕ್ಕೇ ಸೀಮಿತಗೊಂಡಿವೆ ಅವರ ಆಚರಣೆ ಹಾಗೂ ಬಾಂಧವ್ಯ… ತವರಿನ ಸಂಪರ್ಕಕಳೆದುಕೊಂಡು ಮನಸ್ಸಿನಲ್ಲೇ ದುಃಖಿಸುತ್ತಿರುವ ಎಷ್ಟೋ ಜನರನ್ನು ನಾವು ನೋಡುತ್ತಿದ್ದೇವೆ… ಇವತ್ತಿಗೂ ಜನಮಾನಸದಲ್ಲಿ ಉಳಿದಿರುವುದು ಮಾತ್ರ ತಂದೆತಾಯಿಗಳು ಬದುಕಿರುವವರೆಗೆ ಅನುಭವಿಸಿದ ಸಂಭ್ರಮದ ದಿನಗಳು ಹಾಗೂ ಆದರಾಥಿತ್ಯದ ಪ್ರೀತಿ ವಿಶ್ವಾಸದಿಂದ ಒಡಹುಟ್ಟಿದವರೊಂದಿಗೆ ನಕ್ಕುನಲಿದ ಕ್ಷಣಗಳು. ಎಲ್ಲಾ ಸದಸ್ಯರನ್ನೂ ಸಮಾನವಾಗಿ ಕಾಣುವ ಮನಸ್ಸು ಇರಬೇಕು ..‌ಪ್ರೀತಿ ವಿಶ್ವಾಸದಿಂದ ಎಲ್ಲರೊಂದಿಗೂ ಬೆರೆತು ಬಾಳಿನ ಸಂತೋಷವನ್ನು ಸವಿಯುವ ಮನಸ್ಸು ಮಾಡಿದರೆ ಜೀವನ ಸುಂದರವಾಗಿರುವುದು.

ಕುಟುಂಬ ಸದಸ್ಯರಿಗೆ ಪ್ರೀತಿಯಿಂದ ಕಾಣಿ, ಗೌರವದಿಂದ ನೋಡಿ ಎಲ್ಲವೂ ಹಣದಿಂದ ತೂಗಬೇಡಿ, ಹಳೆಯ ಮನಸ್ತಾಪದ ಬಗ್ಗೆ ಮೆಲಕು ಹಾಕಬೇಡಿ, ನಾನು ಸರಿ ಅವರು ಕೆಟ್ಟವರು ಅನ್ನುವುದನ್ನು ಬಿಡಿ, ಉಳಿದ ಜೀವನವನ್ನು ಸಂತೋಷವಾಗಿರಿ, ಎಲ್ಲರನ್ನೂ ಖುಷಿ ಪಡಿಸುವ ಹಾಗೆ ಮಾತನಾಡಿ, ಅಷ್ಟೇ…..

Advertisement

(ಬರಹದ ಮೂಲ : ಸೋಶಿಯಲ್‌ ಮೀಡಿಯಾದಿಂದ)

Only as long as there are parents, the brothers and sisters of the village are bound as friends, after they are gone, everyone keeps complaining for one reason or the other. This is true for all types of families. No matter how hard we hold on, there may be times when the bonds of attachment slip away over time.
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?
May 10, 2024
10:54 AM
by: ಸಾಯಿಶೇಖರ್ ಕರಿಕಳ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |
May 9, 2024
10:10 PM
by: ಮಹೇಶ್ ಪುಚ್ಚಪ್ಪಾಡಿ
ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ
May 9, 2024
8:27 PM
by: ದ ರೂರಲ್ ಮಿರರ್.ಕಾಂ
Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |
May 9, 2024
12:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror