ಹವಾಮಾನ ವರದಿ | 20-09-2025 | ಸೆ.26 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ…? | ಕಾರಣ ಏನು…?

September 20, 2025
7:48 PM
ಬಂಗಾಳಕೊಲ್ಲಿಯ ಉತ್ತರ ಮಯನ್ಮಾರ್ ಕರಾವಳಿಯಲ್ಲಿ ಸೆಪ್ಟೆಂಬರ್ 25 ರಂದು ಪ್ರಭಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

21.09.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 25ರ ತನಕ ಮುಂದುವರಿಯಲಿದ್ದು, ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಬಿಸಿಲು ಹಾಗೂ ಮೋಡದ ವಾತಾವರಣ ಸೆಪ್ಟೆಂಬರ್ 25 ರ ತನಕ ಮುಂದುವರಿಯಲಿದ್ದು, 26 ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 26 ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 28ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಉತ್ತರ ಮಯನ್ಮಾರ್ ಕರಾವಳಿಯಲ್ಲಿ ಸೆಪ್ಟೆಂಬರ್ 25 ರಂದು ಪ್ರಭಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror